ವಾರ್ಧಾ ನದಿಯಲ್ಲಿ ದೋಣಿ ಮುಳುಗಿ 3 ಸಾವು, ಹಲವರ ಕಣ್ಮರೆ

ಮುಂಬೈ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ವಾರ್ಧಾ ನದಿಯಲ್ಲಿ ಮಂಗಳವಾರ ದೋಣಿ ಮಗುಚಿ ಮೂವರು ಸಾವನ್ನಪ್ಪಿದ್ದಾರೆ. ಈ ದುರ್ಘನೆಯಲ್ಲಿ ಕನಿಷ್ಠ 11 ಜನರು ಕಣ್ಮರೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಪೊಲೀಸ್ ತಂಡ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಇಲ್ಲಿಯವರೆಗೆ ಅಪ್ರಾಪ್ತ ಬಾಲಕಿ ಸೇರಿದಂತೆ ಮೂರು ಮೃತದೇಹಗಳನ್ನು ನದಿಯಿಂದ ಹೊರತೆಗೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

ಬೆನೊಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹತ್ರಾಣ ಗ್ರಾಮದಲ್ಲಿ ಬೆಳಿಗ್ಗೆ 10.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಮೂರು ಕುಟುಂಬಗಳ 11 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದಿದೆ ಎಂದು ಅವರು ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅಮರಾವತಿ ಜಿಲ್ಲೆಯ ಎಸ್‌ಪಿ ಹರಿ ಬಾಲಾಜಿ, ವಾರ್ಧಾ ನದಿಯಲ್ಲಿ ದೋಣಿ ಮಗುಚಿದ ಘಟನೆಯಲ್ಲಿ 3 ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಈ ಘಟನೆ ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಅಮರಾವತಿಯ ಬೆನೋಡಾ ಶಹೀದ್ ಪೊಲೀಸ್ ಠಾಣೆ ವ್ಯಾಪ್ತಿಯಶ್ರೀ ಕ್ಷೇತ್ರ ಜುಂಜ್ ನಲ್ಲಿ ನಡೆದಿದೆ. ದೋಣಿಯಲ್ಲಿದ್ದ 11 ಜನರು ಒಂದೇ ಕುಟುಂಬಕ್ಕೆ ಸೇರಿದವರು.

× Chat with us