ಕೋವಿಡ್| ರಾಜ್ಯದಲ್ಲಿ ನಾಳೆ ರಾತ್ರಿಯಿಂದ 14 ದಿನ ಕರ್ಫ್ಯೂ ಜಾರಿ: ಸಿಎಂ ಯಡಿಯೂರಪ್ಪ

ಬೆಂಗಳೂರು: ತೀವ್ರವಾಗಿ ಹರಡುತ್ತಿರುವ ಕೋವಿಡ್‌ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ 14 ದಿನ ಕರ್ಫ್ಯೂ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿದರು.

ಸಚಿವ ಸಂಪುಟ ಸಭೆ ಬಳಿಕ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ (ಮಂಗಳವಾರ) ರಾತ್ರಿ 9 ಗಂಟೆಯಿಂದಲೇ ಕೋವಿಡ್‌ ಕರ್ಫ್ಯೂ ಜಾರಿಗೆ ಬರಲಿದೆ ಎಂದು ತಿಳಿಸಿದರು.

ಬೆಳಿಗ್ಗೆ 6ರಿಂದ 10ಗಂಟೆವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ. ಸರ್ಕಾರಿ ಸಾರಿಗೆ ಬಸ್‌ಗಳು ಸೇರಿ ಯಾವುದೇ ಸಾರಿಗೆ ಸಂಚಾರ ಇರುವುದಿಲ್ಲ. ಮೆಟ್ರೋ ರೈಲು ಸಂಚಾರ ಬಂದ್ ಆಗಲಿದೆ. ವಾಣಿಜ್ಯ ಚಟುವಟಿಕೆ ಬಂದ್ ಆಗಲಿವೆ. ಅಂತರರಾಜ್ಯ ಗೂಡ್ಸ್ ವಾಹನಗಳ ಸಂಚಾರಕ್ಕೆ ಅವಕಾಶ ನಿಡಲಾಗಿದೆ.

18 ರಿಂದ 45 ವರ್ಷ ವಯಸ್ಸಿನ ನಾಗರಿಕರಿಗೆ ಉಚಿತ ಲಸಿಕೆ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.