ಅಪ್ರಾಪ್ತೆ ಮೇಲೆ ಅತ್ಯಾಚಾರ: ಬಾಲಕಿ ಈಗ 8 ತಿಂಗಳ ಗರ್ಭಿಣಿ

ನಂಜನಗೂಡು: ತಾಲ್ಲೂಕಿನ ಗ್ರಾಮವೊಂದರ 14 ವರ್ಷದ ಬಾಲಕಿಯೊಬ್ಬಳು ಅತ್ಯಾಚಾರಕ್ಕೆ ಒಳಗಾಗಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಈ ಸಂಬಂಧ ಸಮೀಪದ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಯ ತಾಯಿ ದೂರು ದಾಖಲಿಸಿದ್ದಾರೆ.

ನಂಜನಗೂಡು ತಾಲ್ಲೂಕಿನಲ್ಲಿ ಕೊರೊನಾ ಸಂದರ್ಭದಲ್ಲಿ ಅಪ್ರಾಪ್ತೆಯ ತಾಯಿ ಈಕೆಯನ್ನು ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಅಣ್ಣನ ಮನೆಗೆ ಕಳುಹಿಸಿದ್ದರು. ಈ ವೇಳೆ ಅಣ್ಣನ ಮಗ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದು, ಮಗಳು ಗರ್ಭಿಣಿಯಾಗಿದ್ದಾಳೆ ಎಂದು ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

× Chat with us