Mysore
20
clear sky

Social Media

ಗುರುವಾರ, 29 ಜನವರಿ 2026
Light
Dark

ಕಸ ವಿಂಗಡಣೆ ಪ್ರತಿಜ್ಞೆ : ಸಹಿ ಸಂಗ್ರಹ ಅಭಿಯಾನ

ಚಾಮರಾಜನಗರ: ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳ ವ್ಯಾಪ್ತಿಯ ಮನೆಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಹಸಿ ಹಾಗೂ ಒಣ ಕಸವನ್ನಾಗಿ ವಿಂಗಡಿಸುವ ಕುರಿತ ಪ್ರತಿಜ್ಞೆ ಬಗ್ಗೆ ಹಮ್ಮಿಕೊಳ್ಳಲಾಗಿರುವ ಸಹಿ ಸಂಗ್ರಹ ಅಭಿಯಾನವು ಇಂದು(ಗುರುವಾರ) ಆರಂಭಗೊಂಡಿತು.

ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಿಲ್ಲಾ ನಗರಾಭಿವೃದ್ದಿ ಕೋಶದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಫೋಟೊ ಬೂತ್ ಪಕ್ಕದಲ್ಲಿ ಸಹಿ ಹಾಕಿ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಅತಿ ಹೆಚ್ಚು ತ್ಯಾಜ್ಯ ಉತ್ಪಾದನೆ ಆಗುವಂತಹ ಸ್ಥಳಗಳಾದ ಹೋಟೆಲ್, ಕಲ್ಯಾಣ ಮಂಟಪಗಳು, ವಾಣಿಜ್ಯ ಚಟುವಟಿಕೆ ಪ್ರದೇಶಗಳಲ್ಲಿ ಹಸಿಕಸ ಹಾಗೂ ಒಣಕಸವನ್ನಾಗಿ ವಿಂಗಡಿಸುವ ಜವಾಬ್ದಾರಿ ಹೆಚ್ಚಿದೆ. ಅಂತಹ ಕಡೆಯೂ ಸ್ಥಳೀಯ ಸಂಸ್ಥೆಗಳೊಡನೆ ಕೈ ಜೋಡಿಸಿ ವೈಜ್ಞಾನಿಕ ಕಸ ವಿಂಗಡಣೆಗೆ ಸಹಕರಿಸಬೇಕು ಎಂದರು.

ನಗರಸಭೆ ಅಧ್ಯಕ್ಷರಾದ ಆಶಾ ನಟರಾಜು ಮಾತನಾಡಿ, ಸ್ವಚ್ಛ ಭಾರತ್ ಮಿಷನ್ ಯೋಜನೆ ಯಶಸ್ವಿಗೆ ಜನರ ಸಹಕಾರ ಅಗತ್ಯ, ಸ್ವಚ್ಛತಾ ಆಪ್ ಡೌನ್‌ಲೋಡ್ ಮಾಡಿ ಅದರಲ್ಲಿ ಸ್ವಚ್ಛತೆಗೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಿದಲ್ಲಿ ೪೮ ಗಂಟೆಗಳಲ್ಲಿ ಬಗೆಹರಿಸಲಾಗುವುದು ಎಂದರು.

ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ಪಿ.ಸುಧಾ, ಪರಿಸರ ಇಂಜಿನಿುಂರ್ ಗಿರಿಜಾ, ಆರೋಗ್ಯ ನಿರೀಕ್ಷಕರಾದ ಸುಷ್ಮಾ, ಮಂಜುನಾಥ, ಗ್ರೀನ್ ಸಂಸ್ಥೆಯ ಕಾರ್ಯದರ್ಶಿ ಮಹದೇವಸ್ವಾಮಿ ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!