Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಧಾರ್ಮಿಕ ಕಾರಿಡಾರ್‌ಗಳ ಅಭಿವೃದ್ದಿಯತ್ತ ಚಿಂತನೆ: ಶಶಿಕಲಾ ಜೊಲ್ಲೆ

ಕೆ ಆರ್‌ ಪೇಟೆ: ಪ್ರಧಾನಿ ನರೇಂದ್ರ ಮೋದಿ ಅವರ ಮುತುವರ್ಜಿಯಿಂದ ದೇಶದಲ್ಲಿ ಧಾರ್ಮಿಕ ಕ್ಷೇತ್ರಗಳನ್ನು ಪುನರುಜ್ಜೀವನಗೊಳಿಸುತ್ತಿರುವಂತೆ ಕರ್ನಾಟಕ ರಾಜ್ಯದಲ್ಲೂ ಧಾರ್ಮಿಕ ಕಾರಿಡಾರ್‌ ಗಳ ಅಭಿವೃದ್ದಿಗೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಒಲವು ತೋರಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಅವಕಾಶಗಳ ಬಗ್ಗೆ ವರದಿ ನೀಡುವಂತೆ ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ತಿಳಿಸಿದರು.

ಕೆ ಆರ್‌ ಪೇಟೆಯಲ್ಲಿ ದಕ್ಷಿಣ ಭಾರತದ ಮಹಾಕುಂಭಮೇಳವನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ. ಮಲೆ ಮಹದೇಶ್ವರರು ಶ್ರೀಶೈಲದಿಂದ ಬಂದಾಗ ಪಾದಸ್ಪರ್ಶ ಮಾಡಿದ್ದ ಪವಿತ್ರ ಸ್ಥಳದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಬಹಳ ವಿಶೇಷ. ಪೂಜ್ಯರ ನೇತೃತ್ವದಲ್ಲಿ ನಡೆಯುತ್ತಿರುವ ಇಂತಹ ಕಾರ್ಯಕ್ರಮಗಳ ಮೂಲಕ ನಮ್ಮ ಮೂಲ ಧಾರ್ಮಿಕ ಸಂಸ್ಕೃತಿಯನ್ನ ಜನ ಮಾನಸದಲ್ಲಿ ಬಿತ್ತಿ ಬೆಳೆಸುವ ಕಾರ್ಯ ನಡೆಸಲಾಗುತ್ತಿದೆ. ಸಂಸ್ಕೃತಿಯನ್ನು ಉಳಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಾಗೂ ನಮ್ಮ ಸರಕಾರವೂ ಚಿಂತನೆ ನಡೆಸಿದ್ದು, ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಹೇಳಿದರು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ