Mysore
28
overcast clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ಹನೂರು : ಕಲ್ಲು ಸಾಗಿಸುತ್ತಿದ್ದ ಲಾರಿ ಹರಿದು ಕುರಿಗಳ ಸಾವು

ಹನೂರು: ತಮಿಳುನಾಡಿಗೆ ಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಕುರಿಗಳ ಮೇಲೆ ಹರಿದ ಪರಿಣಾಮ ಎರಡು ಕುರಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಜ್ಜೀಪುರ ಗ್ರಾಮದ ಹೊರವಲಯದಲ್ಲಿ ಜರುಗಿದೆ.
ತುಮಕೂರು ಮೂಲದ ಲಲಿತಾ ಎಂಬವವರು ಹನೂರು ಪಟ್ಟಣ ಮಾರ್ಗವಾಗಿ ಅಜ್ಜೀಪುರ ಗ್ರಾಮಕ್ಕೆ ಐವತ್ತಕ್ಕೂ ಹೆಚ್ಚು ಕುರಿಗಳನ್ನು ಮೇಯಿಸಲು ಕರೆದೊಯ್ಯುತ್ತಿದ್ದ ವೇಳೆ ಹನೂರು ಮಾರ್ಗವಾಗಿ ತಮಿಳುನಾಡಿಗೆ ಹೋಗುತ್ತಿದ್ದ ವೇಳೆ ಕಣಿವೆ ಆಂಜನೇಯ ದೇವಾಲಯದ ಬಳಿ 2ಕುರಿಗಳ ಮೇಲೆ ಲಾರಿ ಹರಿದ ಪರಿಣಾಮ 2ಕುರಿಗಳು ಸ್ಥಳದಲ್ಲೇ ಮೃತಪಟ್ಟಿವೆ. ಕುರಿ ಸಾಕಾಣೆಯನ್ನೇ ನಂಬಿಕೊಂಡು ಜೀವನ ಸಾಗಿದುತ್ತಿದ್ದ ಕುಟುಂಬ ಸಂಕಷ್ಟಕ್ಕೆ ಒಳಗಾಗಿದೆ.
ಈ ಸಂಬಂಧ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ .

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!