ಮೈಸೂರು: ನಗರದ ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ಇಂದು ಕರ್ನಾಟಕ ವಿಶ್ರಾಂತ ಕುಲಪತಿಗಳ ವೇದಿಕೆ ಮತ್ತು ಮೈಸೂರು ವಿವಿ ಹಳೆ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ವಿದ್ಯಾ ರ್ಥಿಗಳಿಗೆ, ಬೋಧಕರಿಗಾಗಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ರ(ಎನ್‌ಇಪಿ) ಅನುಷ್ಠಾನಕ್ಕೆ ಸಂಬಂಧಿಸಿದ ಕಾರ್ಯಾಗಾರವನ್ನುಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್ ಉದ್ಘಾಟಸಿದರು
ಬಳಿಕ ಮಾತನಾಡಿ ಅವರು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು, ಅದಕ್ಕೆ ಪೂರಕವಾಗಿ ಅನುದಾನ ಮತ್ತು ಮೂಲ ಸೌಕರ್ಯಗಳನ್ನು ಸರ್ಕಾರ ಕಲ್ಪಿಸಬೇಕು. ಆಗ ಮಾತ್ರ ಶಿಕ್ಷಣ ನೀತಿ ಯಶಸ್ವಿಯಾಗುತ್ತದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್ ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿಗಳಾದ ಪ್ರೊ.ಎಸ್.ಎನ್.ಹೆಗ್ಡೆ, ಡಾ.ಎನ್.ಎಸ್.ರಾಮೇಗೌಡ, ಪ್ರೊ.ಸಿ.ನಾಗಣ್ಣ, ಮೈವಿವಿ ಹಳೇ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಪ್ರೊ.ಎಸ್.ಶ್ರೀಕಂಠ ಸ್ವಾಮಿ, ಅಮೃತೇಶ್ ಮತ್ತಿತರರು ಹಾಜರಿದ್ದರು.





