Mysore
24
overcast clouds

Social Media

ಗುರುವಾರ, 25 ಜೂನ್ 2026
Light
Dark

ತಮಿಳುನಾಡು ಮಾರ್ಗದ ರಸ್ತೆಯಲ್ಲಿ ಗುಡ್ಡ ಕುಸಿತ : ಸಂಚಾರ ಸ್ಥಗಿತ

ಹನೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಂತರ್ ರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯದಲ್ಲಿ ಹಲವಾರು ಕಡೆ ಗುಡ್ಡ ಕುಸಿತ ದಿಂದಾಗಿ ಸಂಚಾರ ಸ್ಥಗಿತಗೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ತಾಲೂಕಿನ ರಾಮಾಪುರದಿಂದ ಬರಗೂರಿಗೆ ತೆರಳುವ ಮಾರ್ಗ ಮಧ್ಯದಲ್ಲಿ ಹಲವಾರು ಕಡೆ ಗುಡ್ಡ ಕುಸಿತ ಉಂಟಾಗಿದ್ದು ರಸ್ತೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ಗುಡ್ಡ ಕುಸಿತದಿಂದ ಗಿಡ ಮರಗಳು ರಸ್ತೆಯ ಮಧ್ಯದಲ್ಲಿ ಬಿದ್ದಿರುವುದರಿಂದ ವಾಹನ ಸಂಚಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಸ್ಥಳಕ್ಕೆ ರಾಮಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಇನ್ನು ಮೂರು ಅಥವಾ ನಾಲ್ಕು ದಿನಗಳ ಕಾಲ ಬರಗೂರಿನಿಂದ ರಾಮಪುರ ಕಡೆಗೆ ಯಾವುದೇ ವಾಹನ ಸಂಚಾರ ಮಾಡಬಾರದು ಈ ಮಾರ್ಗದಲ್ಲಿ ಹಲವಾರು ಕಡೆ ಗುಡ್ಡ ಕುಸಿದಿದ್ದು ದುರಸ್ತಿಯಾಗಲು ತಡವಾಗುತ್ತದೆ ಎಂದು ಬರಗೂರಿನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!