Mysore
28
scattered clouds

Social Media

ಬುಧವಾರ, 12 ಆಗಸ್ಟ್ 2026
Light
Dark

ದೀಪಾವಳಿ ಹಬ್ಬದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ

ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ‘ಪರಿಸರ ಸ್ನೇಹಿ’ ಪಟಾಕಿಗೆ ಮಾತ್ರ ಬಳಸಬೇಕು .ಒಂದು ವೇಳೆ ಬೇರೆ ಪಟಾಕಿ ಸಿಡಿಸುವುದು ಕಂಡು ಬಂದರೆ ಸೀಜ್‌ ಮಾಡುವಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪೊಲೀಸ್‌ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ನೀಡಿದ್ದಾರೆ..

ಪಟಾಕಿ ಸಿಡಿಸುವುದರಿಂದ ತ್ಯಾಜ್ಯವನ್ನು ಹೊರಹಾಕಲು ಘನತ್ಯಾಜ್ಯ ವಾಹನಗಳ ನೇಮಕಕ್ಕೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ವಾಯುಮಾಲಿನ್ಯ ಹೆಚ್ಚಾಗದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಗತ್ಯ ಕ್ರಮ ತೆಗೆದುಕೊಂಡಿದ್ದು, ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದ್ದು, ಪರಿಸರ ಸ್ನೇಹಿ ಪಟಾಕಿಗಳನ್ನುಮಾತ್ರ ಬಳಸುವಂತೆ  ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು.

 ದೀಪಾವಳಿ ಹಬ್ಬಕ್ಕೂ ಮುಂಚೆ ಹಾಗೂ ನಂತರ ಬೆಂಗಳೂರು ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ವಾಯುಮಾಲಿನ್ಯ ಹಾಗೂ ಶಬ್ಧಮಾಲಿನ್ಯ ಆಗಲಿದೆ ಎನ್ನುವುದನ್ನು ಪತ್ತೆ ಮಾಡಲು ಮಾಪನ ಅಳವಡಿಕೆ ಮಾಡಲಾಗಿದೆ

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!