Mysore
23
overcast clouds

Social Media

ಮಂಗಳವಾರ, 04 ಆಗಸ್ಟ್ 2026
Light
Dark

ಮಂಡ್ಯ – ಅತ್ಯಾಚಾರ ಕೊಲೆ ಪ್ರಕರಣ : ಸಂತ್ರಸ್ತ ಬಾಲಕಿ ಕುಟುಂಬಕ್ಕೆ 10 ಲಕ್ಷ ರೂ. ಚೆಕ್​​ ಹಸ್ತಾಂತರ

ಮಂಡ್ಯ: ಕಳೆದ ವಾರದಂದು ಮಳವಳ್ಳಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿರುವ ಬಾಲಕಿ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 10 ಲಕ್ಷ ರೂ. ಪರಿಹಾರ ಮಂಜೂರು ಮಾಡಲಾಗಿದೆ. ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಹಾಗೂ ಸಂಸದೆ ಸುಮಲತಾ ಇಂದು ಮೃತ ಬಾಲಕಿ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸರ್ಕಾರದ 10 ಲಕ್ಷ ರೂ. ಚೆಕ್​​ ಹಸ್ತಾಂತರ ಮಾಡಿ ಸಾಂತ್ವನ ಹೇಳಿದ್ದಾರೆ.
ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಮಂಜೂರು ಮಾಡುವಂತೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಪರಿಹಾರ ಘೋಷಣೆ ಮಾಡಿದ್ದರು. ಇದೇ ಸಂದರ್ಭದಲ್ಲಿ ಸಂಸದೆ ಸುಮಲತಾ ಅಂಬರೀಷ್, ಶಾಸಕ ಡಾ.ಕೆ.ಅನ್ನದಾನಿ,ಜಿಲ್ಲಾಧಿಕಾರಿ ಎಸ್.ಅಶ್ವತಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ತಹಶೀಲ್ದಾರ್ ವಿಜಿಯಣ್ಣ ಸೇರಿದಂತೆ ಇತರರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!