Mysore
19
overcast clouds

Social Media

ಶನಿವಾರ, 10 ಜನವರಿ 2026
Light
Dark

10 ಲಕ್ಷ ಮಂದಿಗೆ ಬೃಹತ್‌ ಉದ್ಯೋಗ ಮೇಳ 22 ರಂದು ಚಾಲನೆ :ಪ್ರಧಾನಿ ಮೋದಿ

ನವದೆಹಲಿ :10 ಲಕ್ಷ ಮಂದಿಗೆ ಉದ್ಯೋಗ ನೀಡುವ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 22ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.

ಯುವಕರಿಗೆ ಉದ್ಯೋಗ ನೀಡುವುದರ ಜೊತೆಗೆ ನಾಗರಿಕರ ಕಲ್ಯಾಣವನ್ನು ಖಾತರಿಪಡಿಸುವ ಪ್ರಧಾನ ಮಂತ್ರಿಗಳ ಆಶಯದ ನಿಟ್ಟಿನಲ್ಲಿ ಇದು ಪೂರಕ ಕಾರ್ಯಕ್ರಮವಾಗಿದೆ. ಮೋದಿ ಅವರ ನಿರ್ದೇಶನದ ಮೇರೆಗೆ ಎಲ್ಲ ಇಲಾಖೆಗಳ ಸಚಿವರು ಖಾಲಿ ಇರುವ ಹುದ್ದೆಗೆಳ ನೇಮಕಾತಿಗಾಗಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಪಿಎಂಒ ಹೇಳಿದೆ.

ದೇಶದಾದ್ಯಂತ 38 ಸಚಿವಾಲಯಗಳ ಅಥವಾ ಇಲಾಖೆಗಳಿಗಾಗಿ ದೇಶದಾದ್ಯಂತ ನೇಮಕಾತಿ ನಡೆಸಲಾಗುತ್ತಿದೆ. ಸರ್ಕಾರದ ಗ್ರೂಪ್ ಎ ಶ್ರೇಣಿಯಿಂದ ಹುದ್ದೆಗಳಿಂದ ತೊಡಗಿ ಗ್ರೂಪ್ ಸಿ ಶ್ರೇಣಿಯ ಹುದ್ದೆಗಳ ವರೆಗೆ ನೇಮಕಾತಿ ನಡೆಯಲಿದೆ. ಕೇಂದ್ರ ಸಶಸ್ತ್ರ ಪಡೆ ಸಿಬ್ಬಂದಿ, ಸಬ್-ಇನ್‌ಸ್ಪೆಕ್ಟರ್‌ಗಳು, ಕಾನ್‌ಸ್ಟೆಬಲ್‌ಗಳು, ಎಲ್‌ಡಿಸಿ, ಸ್ಟೆನೋ, ಪಿಎ, ಆದಾಯ ತೆರಿಗೆ ಇನ್ಸ್‌ಪೆಕ್ಟರ್‌ಗಳು ಮತ್ತು ಎಂಟಿಎಸ್ ಕೂಡ ನೇಮಕವಾಗುತ್ತಿರುವ ಹುದ್ದೆಗಳಲ್ಲಿ ಒಳಗೊಂಡಿವೆ ಎಂದು ಪಿಎಂಒ ಪ್ರಕಟಣೆಯಲ್ಲಿ ಹೇಳಲಾಗಿದೆ.

ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ನಿರುದ್ಯೋಗಕ್ಕೆ ಸಂಬಂಧಿಸಿ ಸತತವಾಗಿ ಟೀಕೆಗಳನ್ನು ಮಾಡುತ್ತಲೇ ಇವೆ. ಕೇಂದ್ರದಲ್ಲಿ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಯುವಕರು ನಿರುದ್ಯೋಗಿಗಳಾಗಿದ್ದಾರೆ. ಬಡವರಿಗೆ ಜೀವನ ಕಷ್ಟಕರವಾಗಿ ಪರಿಣಮಿಸಿದೆ. ಉದ್ಯೋಗ ಸೃಷ್ಟಿ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಏನೂ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್, ಎಎಪಿ ಸೇರಿದಂತೆ ಪ್ರತಿಪಕ್ಷಗಳು ಹಲವು ಬಾರಿ ವಾಗ್ದಾಳಿ ನಡೆಸಿವೆ. ಈ ಎಲ್ಲ ರಾಜಕೀಯ ವಿದ್ಯಮಾನಗಳ ನಡುವೆಯೇ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!