Mysore
24
overcast clouds

Social Media

ಗುರುವಾರ, 01 ಜನವರಿ 2026
Light
Dark

ದೀಪಾವಳಿಗೆ ಮೈಸೂರು ನಿಶಬ್ದ ವಲಯ: ಡಾ.ಚಂದ್ರಗುಪ್ತ ಆದೇಶ

ಮೈಸೂರು: ದೀಪಾವಳಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಮೈಸೂರು ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಸ್ಥಳಗಳನ್ನು ನಿಶಬ್ದ ವಲಯಗಳನ್ನಾಗಿ ಘೋಷಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಶ್ರೀ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ ಪ್ರದೇಶ, ಕಾರಂಜಿಕೆರೆ ಪ್ರದೇಶ, ಲಿಂಗಾಬುದಿಕೆರೆ ಪ್ರದೇಶ, ಸಾರ್ವಜನಿಕ ಉದ್ಯಾನವನಗಳು, ಆಸ್ಪತ್ರೆ ಹಾಗೂ ನರ್ಸಿಂಗ್ ಹೋಮ್‌ಗಳು, ಶೈಕ್ಷಣಿಕ ಸಂಸ್ಥೆಗಳು, ನ್ಯಾಯಾಲಯ, ಧಾರ್ಮಿಕ ಸ್ಥಳಗಳಲ್ಲಿ 100 ಮೀಟರ್ ಸುತ್ತಳತೆ ಪ್ರದೇಶವನ್ನು ಅ. 23 ರಿಂದ 26 ರ ವರೆಗೆ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ನಿಶಬ್ದ ವಲಯವೆಂದು ಗುರುತಿಸಲಾಗಿದೆ.

ಶ್ರೀ ಚಾಮರಾಜೇಂದ್ರ ಮೃಗಾಲಯ, ಕುಕ್ಕರಹಳ್ಳಿ ಕೆರೆ ಪ್ರದೇಶ, ಕಾರಂಜಿಕೆರೆ ಪ್ರದೇಶ, ಲಿಂಗಾಬುದಿಕೆರೆ ಪ್ರದೇಶ, ಸಾರ್ವಜನಿಕ ಉದ್ಯಾನವನಗಳು, ಆಸ್ಪತ್ರೆ ಹಾಗೂ ನರ್ಸಿಂಗ್ ಹೋಮ್‌ಗಳು, ಶೈಕ್ಷಣಿಕ ಸಂಸ್ಥೆಗಳು, ನ್ಯಾಯಾಲಯ, ಧಾರ್ಮಿಕ ಸ್ಥಳಗಳು ನಿಶಬ್ದ ವಲಯಗಳು ಎಂದು ಗುರುತಿಸಲಾಗಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!