Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

ಸ್ವಚ್ಚ ಭಾರತ್ ಯೋಜನೆಯಡಿ ಏಕ ಬಳಕೆಯ ಪ್ಲಾಸ್ಟಿಕ್ ವಿಲೇವಾರಿ : ಎಂ.ಎನ್. ನಟರಾಜು

ಚಾಮರಾಜನಗರ: ಪ್ರತಿ ವರ್ಷ ಅಕ್ಟೋಬರ್ ೧ ರಿಂದ ೩೦ ರವರೆಗೆ ಸ್ವಚ್ಚ ಭಾರತ್ ಕಾರ್ಯಕ್ರಮವನ್ನು ಸಾರ್ವಜನಿಕರ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದು, ಈ ಬಾರಿಯೂ ಏಕ ಬಳಕೆಯ ಪ್ಲಾಸ್ಟಿಕ್ ಸಂಗ್ರಹಿಸಿ ವಿಲೇವಾರಿ ಮಾಡಲಾಗುತ್ತದೆ ಎಂದು ಎಂದು ನೆಹರು ಯುವ ಕೇಂದ್ರ ಸಂಘಟನೆ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ರಾಜ್ಯ ನಿರ್ದೇಶಕ ಎಂ.ಎನ್. ನಟರಾಜು ತಿಳಿಸಿದರು.
ಯುವಜನ ವ್ಯವಹಾರಗಳ ಇಲಾಖೆ, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ದೇಶದೆಲ್ಲೆಡೆ ‘ಸ್ವಚ್ಚ ಭಾರತ್ ೨.೦’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರಡಿ ವಿವಿಧ ಕಡೆ ಸ್ವಚ್ಚತಾ ಕಾರ್ಯಕ್ರಮ ನಡೆಸುತ್ತಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಳೆದ ವರ್ಷ ಸ್ವಚ್ಚ ಭಾರತ ಕಾರ್ಯಕ್ರಮದ ಅಂಗವಾಗಿ ದೇಶದ ೭೪೪ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ೭೫ ಲಕ್ಷ ಕೆಜಿ ಏಕಬಳಕೆಯ ಪ್ಲಾಸ್ಟಿಕ್ ಸಂಗ್ರಹಿಸುವ ಗುರಿ ನಿಗದಿಪಡಿಸಲಾಗಿತ್ತು. ಕೇವಲ ೨೨ ದಿನಗಳಲ್ಲಿಯೇ ನಿಗದಿತ ಗುರಿ ಸಾಧಿಸಲಾಗಿದೆ. ಈ ಬಾರಿ ೧ ಕೋಟಿ ಕೆ.ಜಿ. ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರ ಊಹಿಸಲಾಗದ ಹಾಳಾಗಿದೆ. . ಇದನ್ನು ತಡೆಗಟ್ಟಿ ಪ್ರಾಣಿ-ಪಕ್ಷಿ ಸಂಕುಲವನ್ನು ರಕ್ಷಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸ್ವಚ್ಚಭಾರತ ಕಾರ್ಯಕ್ರಮದಲ್ಲಿ ದೇಶದ ೭೪೪ ಜಿಲ್ಲೆಗಳಲ್ಲಿ ಕರ್ನಾಟಕದ ೩೧ ಜಿಲ್ಲೆಗಳು ಸೇರಿವೆ ಎಂದರು.
ಪ್ರಮುಖ ಪ್ರವಾಸಿ ಸ್ಥಳಗಳು, ಧಾರ್ಮಿಕ ಕೇಂದ್ರಗಳು, ಇತರೆ ಕಡೆ ಮುಖ್ಯ ಹೆದ್ದಾರಿಗಳಲ್ಲಿನ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಲಾಗುತ್ತದೆ. ಗ್ರಾಮ ಮಟ್ಟದಲ್ಲಿ ಗ್ರಾಮಪಂಚಾಯಿತಿ ಹಾಗೂ ನಗರ ಪ್ರದೇಶದಲ್ಲಿ ನಗರಾಭಿವೃದ್ಧಿ ಕೋಶ ತ್ಯಾಜ್ಯಸಂಗ್ರಹಣೆಯ ಉಸ್ತುವಾರಿ ವಹಿಸಲಿವೆ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!