Mysore
22
overcast clouds

Social Media

ಶನಿವಾರ, 28 ಫೆಬ್ರವರಿ 2026
Light
Dark

ವಿ.ಸೋಮಣ್ಣ ವಿರುದ್ಧ ದೂರು ದಾಖಲಿಸಲು ಆಗ್ರಹ

ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಮಹಿಳೆ ಕೆನ್ನೆಗೆ ಹೊಡೆದಿದ್ದನ್ನು ಖಂಡಿಸಿ ರೈತ ಸಂಘದ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಮುಖಂಡರು ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ಅವರ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು.
ಶನಿವಾರ ನಗರದಲ್ಲಿ ಸರಿಯಾಗಿ ರೈತ ಮುಖಂಡರ ಸಭೆ ನಡೆಸಲಿಲ್ಲ. ಹಂಗಳದಲ್ಲಿ ಸಮಸ್ಯೆ ಹೇಳಿಕೊಳ್ಳಲು ಮುಂದಾದ ಮಹಿಳೆ ಕೆನ್ನೆಗೆ ಬಾರಿಸಿ ಉದ್ದಟತನ ತೋರಿದ್ದಾರೆ ಎಂದು ಖಂಡಿಸಿದರು.
ಸ್ಥಳಕ್ಕೆ ಡಿವೈಎಸ್ಪಿ ಪ್ರಿಯದರ್ಶಿನಿ ಅವರು ಭೇಟಿ ನೀಡಿ ಪ್ರಕರಣ ದಾಖಲಿಸುವುದಾಗಿ ಹೇಳಿಕೆ ನೀಡಿದ ನಂತರ ಪ್ರತಿಭಟನೆ ಕೈಬಿಟ್ಟರು.
ರೈತ ಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್, ಡಾ.ಗುರುಪ್ರಸಾದ್, ಹೆಬ್ಬಸೂರು ಬಸವಣ್ಣ, ಜ್ಯೋತಿಗೌಡನಪುರ ಸಿದ್ದರಾಜು ಇತರರು ಪಾಲ್ಗೊಂಡಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!