Mysore
24
overcast clouds

Social Media

ಬುಧವಾರ, 17 ಜೂನ್ 2026
Light
Dark

ಹಣ ಎಣಿಸಲು ಯಂತ್ರ ಇಟ್ಟುಕೊಂಡಿದ್ದ ಜೂಜುಕೋರರು!

೩೨ ಮಂದಿ ಬಂಧಿಸಿ, ೧೭.೨೪ ಲಕ್ಷ ರೂ. ವಶಪಡಿಸಿಕೊಂಡ ಪೊಲೀಸರು

ಮೈಸೂರು: ನಗರದ ಪ್ರತಿಷ್ಠಿತ ಬಡಾವಣೆಯ ಗ್ಯಾರೇಜ್‌ವೊಂದರ ಹಿಂಭಾಗದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ವಿಜಯನಗರ ಠಾಣೆ ಮತ್ತು ಸಿಸಿಬಿ ಪೊಲೀಸರು, ಹಣ ಎಣಿಸುವ ಯಂತ್ರವನ್ನು ಪಕ್ಕದಲ್ಲೇ ಇಟ್ಟುಕೊಂಡು ಇಸ್ಪೀಟ್ ಆಡುತ್ತಿದ್ದ ೩೨ ಜನರನ್ನು ಬಂಧಿಸಿ, ೧೭.೨೪ ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.

ಹಿನಕಲ್ ಗ್ರಾಮದ ಯಶಸ್ವಿನಿ ಕಲ್ಯಾಣಮಂಟಪದ ಬಳಿಯ ಆದಿತ್ಯ ಬಡಾವಣೆಯ ಗ್ಯಾರೇಜ್ ಹಿಂಭಾಗದ ಕೊಠಡಿಯಲ್ಲಿ ಜೂಜಾಡುತ್ತಿರುವ ಬಗ್ಗೆ ವಿಜಯನಗರ ಠಾಣೆ ಪೊಲೀಸರಿಗೆ ಮಾಹಿತಿ ದೊರೆತಿದೆ. ವಿಜಯನಗರ ಠಾಣೆ ಪೊಲೀಸರು ಮತ್ತು ಸಿಸಿಬಿ ಪೊಲೀಸರು ರಾತ್ರಿ ಜೂಜು ಅಡ್ಡೆಯ ಮೇಲೆ ದಿಢೀರ್ ಜಂಟಿ ಕಾರ್ಯಾಚರಣೆ ನಡೆಸಿ ಜೂಜಾಡುತ್ತಿದ್ದ ೩೨ ಜನರನ್ನು ಬಂಧಿಸಿದರು. ಜೂಜಾಟಕ್ಕೆ ಪಣಕ್ಕಿಡಲಾಗಿದ್ದ ೧೭.೨೪ ಲಕ್ಷ ನಗದು, ಹಣವ ಎಣಿಸುವ ಯಂತ್ರವನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಗೀತಾ ಪ್ರಸನ್ನ ಮಾರ್ಗದರ್ಶನದಲ್ಲಿ ನರಸಿಂಹರಾಜ ವಿಭಾಗದ ಎಸಿಪಿ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿಜಯನಗರ ಠಾಣೆ ಇನ್‌ಸ್ಪೆಕ್ಟರ್ ಬಿ.ಎಸ್.ರವಿಶಂಕರ್, ಸಿಸಿಬಿ ಘಟಕದ ಇನ್‌ಸ್ಪೆಕ್ಟರ್ ಜಿ.ಶೇಖರ್ ಸೇರಿದಂತೆ ಇನ್ನಿತರ ಸಿಬ್ಬಂದಿ ಪಾಲ್ಗೊಂಡಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!