Mysore
24
haze

Social Media

ಶುಕ್ರವಾರ, 02 ಜನವರಿ 2026
Light
Dark

ಗಣೇಶ ಅಮೀನಗಡ ಕೃತಿಗೆ ತೋಂಟದ ಸಿದ್ಧಲಿಂಗ ಶ್ರೀ ಪ್ರಶಸ್ತಿ

ಮೈಸೂರು: ಲೇಖಕ, ಪ್ರಕಾಶಕ ಗಣೇಶ ಅಮೀನಗಡ ಅವರ ರಂಗಭೂಮಿ ಕುರಿತ ಲೇಖನಗಳ ಸಂಕಲನ ‘ಮಾತು ಹಾಡಾಗಲಿ ಹಾಡು ಮಾತಾಗಲಿ’ ಕೃತಿ ವಿಜಯಪುರದ ಕನ್ನಡ ಪುಸ್ತಕ ಪರಿಷತ್ತು ನೀಡುವ 2021ನೇ ಸಾಲಿನ ‘ಡಾ.ತೋಂಟದ ಸಿದ್ಧಲಿಂಗ ಶ್ರೀ’ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ.

ಪ್ರಶಸ್ತಿಯು 5 ಸಾವಿರ ರೂಪಾಯಿ ನಗದು ಪುರಸ್ಕಾರ, ಸ್ಮರಣಿಕೆ ಹಾಗೂ ಪ್ರಮಾಣಪತ್ರ ಒಳಗೊಂಡಿರುತ್ತದೆ‌.
ಪ್ರಶಸ್ತಿ ಪ್ರದಾನ ಅಕ್ಟೋಬರ್ 29ರಂದು ಬೆಳಿಗ್ಗೆ 11 ಗಂಟೆಗೆ ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ಕಡಣಿಯಲ್ಲಿ ಆಯೋಜಿಸಲಾಗಿದೆ. ಅಂದು ಕಡಣಿಯ ಬೆರಗು ಪ್ರಕಾಶನದ ಪುಸ್ತಕೋತ್ಸವವೂ ಏರ್ಪಡಿಸಲಾಗಿದ್ದು, ಪ್ರಕಾಶನದ 32 ಪುಸ್ತಕಗಳು ಬಿಡುಗಡೆಗೊಳ್ಳಲಿವೆ ಎಂದು ಕನ್ನಡ ಪುಸ್ತಕ ಪರಿಷತ್ತಿನ ಸಂಚಾಲಕ ಶಂಕರ ಬೈಚಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!