ಹುಣಸೂರು ಮೂಲದ ಅಧಿಕಾರಿ
ಕೆ.ಆರ್.ಪುರಂ: ಇತ್ತೀಚೆಗೆ ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಂಡಿದ್ದ ಇನ್ಸ್‌ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕೆ.ಆರ್.ಪುರಂನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ನಂದೀಶ್ ಮೂಲತಃ ಮೈಸೂರು ಜಿಲ್ಲೆ ಹುಣಸೂರು ಮೂಲದವರು. ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರ ಸಂಬಂಧಿ ಕೂಡ ಆಗಿದ್ದರು.
ಗುರುವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಎದೆ ನೋವು ಕಂಡುಬಂದಿದೆ. ನಂತರ ಕೆಆರ್ ಪುರಂನ ಲಕ್ಷ್ಮೀ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ಹೃದಯಾಘಾತದಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಪರಪ್ಪನ ಅಗ್ರಹಾರ ಠಾಣೆಯಲ್ಲಿ 2019ರಿಂದ 2020ರವರೆಗೆ ಕಾರ್ಯ ನಿರ್ವಹಿಸಿದ್ದರು. ನಂತರ ಆನೇಕಲ್‌ನಲ್ಲಿ ಇನ್ಸ್‌ಪೆಕ್ಟರ್ ಆಗಿದ್ದಾಗ ಅವಧಿ ಮೀರಿ ಪಬ್ ನಡೆಸಲು ಅವಕಾಶ ನೀಡಿದ ಆರೋಪದ ಮೇಲೆ ಅಮಾನತು ಆಗಿದ್ದರು.
ಇತ್ತೀಚೆಗೆ ಕೆ.ಆರ್.ಪುರಂನಲ್ಲಿ
ಪಬ್ ವೊಂದು ಅವಧಿ ಮೀರಿ ನಡೆಸಲು ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ಅಮಾನತುಗೊಂಡಿದ್ದರು.





