Mysore
30
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಅರಬ್ಬಿ ಶಾಲೆಗಳು ನಿಯಮ ಪಾಲಿಸದಿದ್ದಲ್ಲಿ ಕ್ರಮ : ಬಿ.ಸಿ.ನಾಗೇಶ್

ಮಡಿಕೇರಿ : ಅರಬ್ಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮ ಪಾಲಿಸದೆ, ಪ್ರಮುಖ ವಿಷಯಗಳನ್ನೇ ಬೋಧಿಸದೆ ಇರುವುದು ಕಂಡು ಬಂದಿರುವ ಹಿನ್ನೆಲೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಶಾಲೆಗಳು ನಿಯಮ ಪಾಲಿಸದಿದ್ದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ರಾಜ್ಯದಲ್ಲಿ 200 ಅರಬ್ಬಿ ಶಾಲೆಗಳಿದ್ದು, ಈ ಪೈಕಿ 108 ಅನುದಾನಿತ ಶಾಲೆಗಳು ಮತ್ತು 80ಕ್ಕೂ ಅಧಿಕ ಅನುದಾನ ರಹಿತ ಶಾಲೆಗಳಿವೆ. ಶಿಕ್ಷಣ ಇಲಾಖೆಯಲ್ಲಿ ನೋಂದಾಯಿಸಿಕೊಂಡಿರುವ ಈ ಎಲ್ಲಾ ಶಾಲೆಗಳು ರಾಜ್ಯ ಶಿಕ್ಷಣ ಇಲಾಖೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕಾಗಿದೆ ಎಂದರು.
ಬಹುತೇಕ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮ ಪಾಲಿಸುತ್ತಿಲ್ಲ, ವಿಜ್ಞಾನದಂತಹ ಪ್ರಮುಖ ವಿಷಯಗಳನ್ನೇ ಬೋಧಿಸುತ್ತಿಲ್ಲ. ಇದರಿಂದಾಗಿ ಅರಬ್ಬಿ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಡಕಾಗಿದೆ ಎಂಬ ದೂರುಗಳೂ ಕೇಳಿ ಬಂದಿದೆ.
ರಾಜ್ಯದಲ್ಲಿನ ಅರಬ್ಬಿ ಶಾಲೆಗಳ ಸಮೀಕ್ಷೆ ಮಾಡಲಾಗುತ್ತಿದೆ, ಸಮಗ್ರ ಮಾಹಿತಿ ಕಲೆ ಹಾಕಿದ ಬಳಿಕ ಶಿಕ್ಷಣ ಇಲಾಖೆಯ ನಿಯಮ ಪಾಲಿಸದ ಸೂಕ್ತ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ