ಮಡಿಕೇರಿ : ರಾಜ್ಯದಲ್ಲಿ ಸರ್ಕಾರದ ಅನುದಾನ ಪಡೆದ 106,80 ಖಾಸಗಿ ಅರೆಬಿಕ್ ಶಾಲೆಗಳಿವೆ. ಇವು ಶಿಕ್ಷಣ ಇಲಾಖೆಯ ಪಠ್ಯದ ಆಧಾರದಲ್ಲಿ ಬೋಧನೆ ಮಾಡುತ್ತಿರುವ ಬಗ್ಗೆ ವರದಿ ತರಿಸಿಕೊಳ್ಳಲಾಗುವುದು ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆ ಸಂಬಂಧ ಪವಿತ್ರ ಮೃತ್ತಿಕೆ(ಮಣ್ಣು) ಸಂಗ್ರಹಣಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಂಕಿ ಅಂಶಗಳ ಪ್ರಕಾರ 27 ಸಾವಿರ ವಿದ್ಯಾರ್ಥಿಗಳು ಅರೆಬಿಕ್ ಶಾಲೆಗಳಲ್ಲಿ ದಾಖಲಾಗುತ್ತಿದ್ದಾರೆ. ಅಷ್ಟು ವಿದ್ಯಾರ್ಥಿಗಳಲ್ಲಿ 2 ಸಾವಿರ ಮಕ್ಕಳು ಮಾತ್ರವೇ ಎಸ್ ಎಸ್ ಎಲ್ ಸಿ ಪರೀಕ್ಷೆ ತೆಗೆದುಕೊಳ್ಳುತ್ತಿದ್ದಾರೆ. ಅವರಲ್ಲಿಯೂ ವೈಜ್ಞಾನಿಕ ಮನೋಭಾವ ಬೆಳೆಸಬೇಕಿದೆ. ಈ ನಿಟ್ಟಿನಲ್ಲಿ ವರದಿ ತರಿಸಿಕೊಳ್ಳಲು ಮುಂದಾಗಿದ್ದೇವೆ. ವರದಿ ಬಳಿಕ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.