Mysore
29
scattered clouds

Social Media

ಬುಧವಾರ, 31 ಡಿಸೆಂಬರ್ 2025
Light
Dark

ಕೆಂಪೇಗೌಡ  ಪ್ರತಿಮೆಯ ಆವರಣದ ಉದ್ಯಾನಕ್ಕೆ ಚಾಮುಂಡಿ ಸನ್ನಿಧಿಯ ಮಣ್ಣು

 ಮೈಸೂರಿಗೆ ಆಗಮಿಸಿದ ಕೆಂಪೇಗೌಡ ರಥಕ್ಕೆ  ದೇವಸ್ಥಾನದ ಆವರಣದಲ್ಲಿ ಅದ್ದೂರಿ ಸ್ವಾಗತ

ಮೈಸೂರು:ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯ ಆವರಣದ ಉದ್ಯಾನಕ್ಕೆ ಪವಿತ್ರ ಮೃತ್ತಿಕಾ (ಮಣ್ಣು) ಬಳಸುವ ಉದ್ದೇಶದಿಂದ ಮೈಸೂರಿಗೆ ಆಗಮಿಸಿದ ಕೆಂಪೇಗೌಡ ರಥಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಮುಂಡೇಶ್ವರಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಿದರು.

ಬನ್ನಿ ನಾಡ ಕಟ್ಟೋಣ ಎಂಬ ಸಂದೇಶ ಹೊತ್ತು ಬಂದ ರಥವನ್ನು ಚಾಮುಂಡಿ ಬೆಟ್ಟದಲ್ಲಿ ಪೂರ್ಣ ಕುಂಬದೊಂದಿಗೆ ಸ್ವಾಗತಿಸಲಾಯಿತು.ಈ ವೇಳೆ ಮಾತನಾಡಿದ ಸಚಿವರು ಕೆಂಪೇಗೌಡ ಅವರ 108 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 11ರಂದು ಅನಾವರಣಗೊಳಿಸಲಿದ್ದಾರೆ. ಉದ್ಯಾನಕ್ಕೆ ಜಿಲ್ಲೆಯ ನಾನಾ ಭಾಗಗಳಿಂದ ಪವಿತ್ರ ಮಣ್ಣು ಸಂಗ್ರಹಿಸಲಾಗುತ್ತದೆ. ಇದೊಂದು ಐತಿಹಾಸಿಕ ಕಾರ್ಯಕ್ರಮ ಎಂದರು.

ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವರಾದ ಡಾ. ಕೆ.ಸುಧಾಕರ್, ಶಾಸಕರಾದ ನಾಗೇಂದ್ರ, ರಾಮದಾಸ್, ಸಂಸದರಾದ ಪ್ರತಾಪ್ ಸಿಂಹ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಮುಖಂಡರು ಜೊತೆಯಲ್ಲಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!