ಚಾಮರಾಜನಗರ: ಬೆಂಗಳೂರಿನಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ ೧೦೮ ಅಡಿಗಳ ಕಂಚಿನ ಪ್ರತಿಮೆಯ ಉದ್ಘಾಟನೆ ಹಾಗೂ ಪ್ರತಿಮೆ ಆವರಣದ ಉದ್ಯಾನಕ್ಕೆ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಚರಿಸಲಿರುವ
ಕೆoಪೇಗೌಡರ ರಥಕ್ಕೆ ಶುಕ್ರವಾರ ನಗರದಲ್ಲಿ ಚಾಲನೆ ನೀಡಲಾಯಿತು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮoದಿರದ ಆವರಣದಲ್ಲಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಭಿಯಾನಕ್ಕೆ ಹಸಿರು ನಿಶಾನೆ ತೋರಿದರು. ಇದೇ ವೇಳೆ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹಿಸಿದ ಚೀಲವನ್ನು ಶಾಸಕರು ಸಮರ್ಪಿಸಿ, ಅಭಿಯಾನಕ್ಕೆ ಶುಭ ಹಾರೈಸಿದರು.
ನಗರಸಭೆ ಅಧ್ಯಕ್ಷರಾದ ಆಶಾ ನಟರಾಜು, ಜಿಪಂ ಸಿಇಒ ಕೆ.ಎಂ. ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ಸೇರಿದಂತೆ ಗಣ್ಯರು ಕೆಂಪೇಗೌಡರ ರಥಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.





