Mysore
26
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಕಾರ್ಯವೈಖರಿ ಶ್ಲಾಘನೀಯ ;ಶಾಸಕ ಆರ್ ನರೇಂದ್ರ

ಹನೂರು: ಆರ್ಥಿಕವಾಗಿ ನಮ್ಮ ಭಾಗದ ಮಹಿಳೆಯರಿಗೆ ಚೈತನ್ಯ ತರುವ ನಿಟ್ಟಿನಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.

ಪಟ್ಟಣದ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ತೆರೆಯಲಾಗಿರುವ ನೂತನ ಯೋಜನಾ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಬಿ ಸಿ ಟ್ರಸ್ಟ್ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣ ಮಾಡುವುದರ ಜೊತೆಗೆ, ಸಮಾಜದಲ್ಲಿ ಹೆಣ್ಣು ಮಕ್ಕಳು ಸನ್ನಡತೆಯಿಂದ ನಡೆಯುವ ರೀತಿ, ಸಾಂಸಾರಿಕ ಜೀವನದಲ್ಲಿ ಯಾವ ರೀತಿ ನಡೆದುಕೊಳ್ಳಬೇಕು ಸಮಾಜದಲ್ಲಿ ಉತ್ತಮವಾದ ಪ್ರಜೆ,ಇತರರಿಗೆ ಯಾವ ರೀತಿ ಮಾದರಿ ಆಗಿರಬೇಕು ಇರಬೇಕೆಂಬ ಮಾರ್ಗದರ್ಶನವನ್ನು ಸಂಸ್ಥೆ ನೀಡುತ್ತಿರುವುದು ಸಂತಸದ ವಿಚಾರ. ನಮ್ಮಹನೂರು ತಾಲೂಕಿನಲ್ಲಿ ಸುಮಾರು 2 ಸಾವಿರ ಸಂಘಗಳು ಕಾರ್ಯನಿರ್ವಹಿಸುತ್ತಿದೆ ಈ ಸಂಘದ ವ್ಯಾಪ್ತಿಯಲ್ಲಿ 30 ಸಾವಿರ ಮಹಿಳೆಯರು ಸದಸ್ಯರಾಗಿದ್ದಾರೆ. ಇಷ್ಟು ಕುಟುಂಬಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸಂಸ್ಥೆಯು ಶ್ರಮಿಸುತ್ತಿದೆ ಈ ಸಂಸ್ಥೆಯು ಕರ್ನಾಟಕದಾದ್ಯಂತ ಉತ್ತಮವಾಗಿ ಬೆಳೆಯುತ್ತಿದೆ. ಇನ್ನು ಇದು ದೇಶಾದ್ಯಂತ ವಿಸ್ತಾರವಾಗಲಿ ಎಂದು ಆಶಿಸಿದರು .

 

ಮಾಜಿ ಶಾಸಕಿ ಪರಿಮಳ ನಾಗಪ್ಪ ಮಾತನಾಡಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಹಾಗೂ ಹೇಮಾವತಿ ರವರು ಈ ಸಂಸ್ಥೆಯ ಬೆಳೆಸುವ ನಿಟ್ಟಿನಲ್ಲಿ ಹಗಲಿ ಶ್ರಮಿಸುತ್ತಿದ್ದಾರೆ. ಶ್ರೀ ಮಂಜುನಾಥ ರವರ ಆಶೀರ್ವಾದದಿಂದ ಈ ಸಂಸ್ಥೆಯು ಉತ್ತಮವಾಗಿ ಬೆಳೆಯುತ್ತಿದೆ. ನಮ್ಮ ಕ್ಷೇತ್ರದಲ್ಲಿ ಇರುವುದು ಬಹಳ ಅನುಕೂಲವಾಗಿದೆ. ಮುಂದಿನ ದಿನಗಳಲ್ಲಿ ಈ ಸಂಸ್ಥೆ ಹನೂರು ಭಾಗದ ಕೆಲವು ಗ್ರಾಮಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲಿ ಎಂದು ತಿಳಿಸಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್ ಮಾತನಾಡಿ ಕೊಳ್ಳೇಗಾಲ ಹಾಗೂ ಅವಿಭಾಜಿತ ಹನೂರು ತಾಲೂಕಿನಲ್ಲಿ ಸುಮಾರು 5000 ಸಂಘಗಳು ಕಾರ್ಯನಿರ್ವಹಿಸುತ್ತಿದೆ. ಸುಮಾರು 45 ಸಾವಿರ ಕುಟುಂಬಗಳಿಗೆ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಸಣ್ಣ ರೈತರಿಗೆ ಹಾಲು ಉತ್ಪಾದಕ ಸಂಘಗಳಿಗೆ ಸಹ ಅನುಕೂಲ ಕಲ್ಪಿಸಿದ್ದೇವೆ ಕೆರೆಗಳ ಪುನಶ್ಚೇತನ, ಸರ್ಕಾರಿ ಶಾಲೆಗಳಿಗೆ ಬೆಂಚ್ ಡೆಸ್ಕ್ ಕೊಡಿಸಿ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಂಸ್ಥೆಯು ಶ್ರಮಿಸುತ್ತಿದೆ ಮುಂದಿನ ದಿನಗಳಲ್ಲಿ ಇದನ್ನು ವಿಸ್ತಾರ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಯೋಜನಾಧಿಕಾರಿ ಲತಾ ಬೆಂಗೇರಿ,ಎಂ ಎಸ್ ಯೋಜನಾಧಿಕಾರಿ ಗಣಪತಿ, ಯೋಜನಾಧಿಕಾರಿಗಳಾದ ಹರೀಶ್ ಶೆಟ್ಟಿ , ಪ್ರವೀಣ್ , ಪ್ರವೀಣ್ ಕುಮಾರ್ ವೈ ಎಸ್,ಎಂ ಚಂದ್ರಶೇಖರ್,ಪುರುಷೋತ್ತಮ್ ಹನೂರು ನೋಡಲ್ ಅಧಿಕಾರಿ ಶೇಖರ್ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಪ್ರಕಾಶ್ ನಾಯ್ಡು,ಮುಖಂಡರಾದ ಗೋವಿಂದೇಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ