Mysore
28
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಮೀನು ಹಿಡಿಯಲು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

ಹನೂರು: ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೋರ್ವ  ನೀರಿನಲ್ಲಿ ಮುಳುಗಿ  ಮೃತಪಟ್ಟಿರುವ ಘಟನೆ ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ಜರುಗಿದೆ.

ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದ ನಿವಾಸಿ ಮದಲೈಮುತ್ತು  (38) ಮೃತಪಟ್ಟವರು.

ನಾಲ್ ರೋಡ್ ಗ್ರಾಮದಿಂದ ವಡಕೆಹಳ್ಳ  ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಸಿಗುವ ಚೆಕ್ ಡ್ಯಾಮ್‌ನಲ್ಲಿ ಮೃತ ಮದಲೈ ಮುತ್ತು  ಪ್ರತಿದಿನ ಮೀನು ಹಿಡಿಯಲು ತೆರಳುತ್ತಿದ್ದರು ಎನ್ನಲಾಗಿದೆ. ಭಾನುವಾರ ಸಹ ಮೀನು ಹಿಡಿಯಲು ಬಲೆ ಹಾಕುವ ವೇಳೆ  ಮೂರ್ಛೆ ತಪ್ಪಿ ನೀರಿನಲ್ಲಿ ಮುಳುಗಿದ್ದಾರೆ.

ತಕ್ಷಣ ಗ್ರಾಮಸ್ಥರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಚರಣೆ  ನಡೆಸಿ ಮೃತದೇಹವನ್ನು ಹೊರ ತೆಗೆದು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ರಾಮಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!