Mysore
23
overcast clouds

Social Media

ಭಾನುವಾರ, 14 ಜೂನ್ 2026
Light
Dark

ಕಮಲ ಅರಳಿಸಲು ಬಿಜೆಪಿ ಮಾಸ್ಟರ್ ಪ್ಲಾನ್ : ಕೇಂದ್ರ ಸಚಿವ ಕ್ರಿಷನ್ ಪಾಲ್ ಗುರ್ಜರ್ ಗೆ ಮಂಡ್ಯ ಉಸ್ತುವಾರಿ

ಮಂಡ್ಯ: ಹಳೆ ಮೈಸೂರಿನತ್ತ ಮೂರು ರಾಜಕೀಯ ಪಕ್ಷಗಳ ಕಣ್ಣು ಬಿದ್ದಿದೆ.   ಅದರಲ್ಲೂ ಬಿಜೆಪಿ ಒಂದು ಹೆಜ್ಜೆ ಮುಂದಿಟ್ಟಿದ್ದು, ತನ್ನ ಪ್ರಾಬಲ್ಯ ಸಾಧಿಸಲು ಬೇಕಾದ ತಂತ್ರಗಳನ್ನು ಈಗಿನಿಂದಲೇ ಆರಂಭಿಸಿದೆ. ಮುಂಬರುವ ವಿಧಾನಸಭೆ ಚುನಾವಣೆ ಜೊತೆ 2024ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ಸದೃಢಗೊಳಿಸಬೇಕು ಎಂಬ ಪ್ರಧಾನಿ ಮೋದಿ ಹಾಗೂ ಅಮಿತ್‌ ಶಾ ಸೂಚನೆಯನ್ನು ರಾಜ್ಯ ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ.

ಹಳೆ ಮೈಸೂರು ಭಾಗದಲ್ಲಿ ಈ ಬಾರಿ ಶತಾಯ ಗತಾಯ ಕಮಲವನ್ನ ಅರಳಿಸಲೇ ಬೇಕೆಂದು ಬಿಜೆಪಿ ಹೈ ಕಮಾಂಡ್ ತೀರ್ಮಾನಿಸಿದೆ. ಈ ಹಿನ್ನಲೆ ಈಗಿನಿಂದಲೇ ಬೂತ್ ಮಟ್ಟದಲ್ಲಿ ಕೆಲಸ ಮಾಡಲು ಬಿಜೆಪಿ ಸಿದ್ದತೆಯನ್ನ ನಡೆಸಿದೆ.

ಮುಂಬರುವ ವಿಧಾನಸಭೆ ಚುನಾವಣೆ 2024ರ ಲೋಕಸಭಾ ಚುನಾವಣೆಗೆ ಸೆಮಿಫೈನಲ್​ ಆಗಿದ್ದು, ಕೇಂದ್ರ ಸಚಿವ ಕ್ರಿಷನ್ ಪಾಲ್ ಗುರ್ಜರ್ ಗೆ ಮಂಡ್ಯ ಜಿಲ್ಲೆಯ ಹೊಣೆಯನ್ನ ನೀಡಲಾಗಿದೆ. ಬಿಜೆಪಿ ಮಂಡ್ಯ ಜಿಲ್ಲಾದ್ಯಕ್ಷ ಉಮೇಶ್ ಅವರ ಮೇಲೆ ಪಕ್ಷ ಸಂಘಟನೆಯ ಹೊಣೆಯನ್ನ ಹೊರಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!