ಚಾಮರಾಜನಗರ: ಕೊಳ್ಳೇಗಾಲ ತಾಲ್ಲೂಕಿನ ಕುಂತೂರು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ ಖಾಲಿ ಇದ್ದು ನೇಮಕಾತಿಗಾಗಿ ಗೌರವಧನದ ಆಧಾರದ ಮೇಲೆ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪಂಚಾಯಿತಿ ಕಚೇರಿಯಿಂದ ನಿಗದಿತ ಅರ್ಜಿ ಪಡೆದು ಭರ್ತಿ ಮಾಡಿ ನವೆಂಬರ್ ೧೧ ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ತಾಪಂ ಎಂ.ಆರ್.ಡಬ್ಲೂತ್ಯೃ ಕಾರ್ಯಕರ್ತರನ್ನು ಸಂಪರ್ಕಿಸುವಂತೆ ತಾಪಂ ಇಒ ತಿಳಿಸಿದ್ದಾರೆ.





