Mysore
25
moderate rain

Social Media

ಶನಿವಾರ, 19 ಅಕ್ಟೋಬರ್ 2024
Light
Dark

ತಿಹಾರ್​ ಜೈಲಿನಿಂದ ಕುಸ್ತಿಪಟು ಸುಶೀಲ್​ ಕುಮಾರ್ ಬಿಡುಗಡೆ

ನವದೆಹಲಿ: ರಾಷ್ಟ್ರೀಯ ಕುಸ್ತಿಪಟು ಸಾಗರ್ ಧನಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದ ಒಂದು ದಿನದ ನಂತರ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಶನಿವಾರ ರಾತ್ರಿ ತಿಹಾರ್ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ. ಸಾಗರ್ ಧನಕರ್ ಹತ್ಯೆ ಪ್ರಕರಣದ 18 ಆರೋಪಿಗಳಲ್ಲಿ ಸುಶೀಲ್ ಕುಮಾರ್ ಕೂಡ ಒಬ್ಬರಾಗಿದ್ದಾರೆ.

ಸಾಮಾನ್ಯವಾಗಿ ತಿಹಾರ್​ ಜೈಲಿನ ನಂ.4 ಗೇಟ್​ ಅನ್ನು ಕೈದಿಗಳ ಬಿಡುಗಡೆಗೆ ಬಳಸಲಾಗುತ್ತದೆ. ಆದರೆ ಭದ್ರತಾ ಕಾರಣಗಳಿಗಾಗಿ ಸುಶೀಲ್​ ಕುಮಾರ್​ ಅವರನ್ನು ಪ್ರತ್ಯೇಕ ಗೇಟ್‌ನಿಂದ ಬಿಡುಗಡೆ ಮಾಡಲಾಗಿದೆ. ಶನಿವಾರ ಸಂಜೆಯೇ ಅವರ ಬಿಡುಗಡೆ ವಾರಂಟ್ ತಿಹಾರ್ ಜೈಲಿಗೆ ತಲುಪಿತ್ತು.ಬೆನ್ನು ನೋವಿನಿಂದ ಬಳಲುತ್ತಿರುವ ಸುಶೀಲ್​ ಕುಮಾರ್​ ಪತ್ನಿಗೆ ಶಸ್ತ್ರಚಿಕಿತ್ಸೆಯಿದ್ದು, ಪತ್ನಿಯನ್ನು ಭೇಟಿ ಮಾಡಲು ಅವಕಾಶ ಕೇಳಿದ್ದರು. ಈ ಹಿನ್ನೆಲೆ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇಬ್ಬರು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ ಕಣ್ಗಾವಲು ಇಡುವಂತೆ ನ್ಯಾಯಾಲಯ ಸೂಚಿಸಿದೆ. ಸುಶೀಲ್ ಕುಮಾರ್ ಪತ್ನಿಗೆ ನವೆಂಬರ್ 7 ರಂದು ಶಸ್ತ್ರಚಿಕಿತ್ಸೆ ನಿಗದಿಪಡಿಸಲಾಗಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶಿವಾಜಿ ಆನಂದ್ ಅವರು, ಒಂದು ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ಆಧಾರದ ಮೇಲೆ ಸುಶೀಲ್ ಕುಮಾರ್ ಅವರಿಗೆ ನವೆಂಬರ್ 12 ರವರೆಗೆ ಮಧ್ಯಂತರ ಜಾಮೀನು ನೀಡಿದ್ದಾರೆ. ಮಧ್ಯಂತರ ಜಾಮೀನು ಅವಧಿ ಮುಗಿದ ನಂತರ ಅಂದರೆ ನವೆಂಬರ್ 13 ರಂದು ಸಂಬಂಧಪಟ್ಟ ಜೈಲು ಅಧೀಕ್ಷಕರ ಮುಂದೆ ಶರಣಾಗುವಂತೆ ನ್ಯಾಯಾಲಯ ಸೂಚಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ