Mysore
22
broken clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಅತ್ಯಾಚಾರ ಆರೋಪ: ಸ್ಟಾರ್ ಬ್ಯಾಟ್ಸ್‌ ಮನ್ ಧನುಷ್ಕ ಗುಣತಿಲಕ ಬಂಧನ

ಸಿಡ್ನಿ(ಆಸ್ಟ್ರೇಲಿಯಾ): ಮಹಿಳೆಯೊಬ್ಬರ ಮೇಲೆ  ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಶ್ರೀಲಂಕಾದ ಸ್ಟಾರ್ ಬ್ಯಾಟ್ಸ್‌ ಮನ್ ಧನುಷ್ಕ ಗುಣತಿಲಕ ಅವರನ್ನು ಇಂದು ಬೆಳಿಗ್ಗೆ ಬಂಧಿಸಲಾಗಿದೆ.

29 ವರ್ಷದ ಮಹಿಳೆ ನೀಡಿರುವ ದೂರಿನ ಆಧಾರದ ಮೇಲೆ ಇಂದು ಬೆಳಿಗ್ಗೆ ಸಿಡ್ನಿಯಲ್ಲಿ ಧನುಷ್ಕ ಗುಣತಿಲಕ  ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸಿನವರು ಮಾಹಿತಿ ನೀಡಿದ್ದಾರೆ. ಮಹಿಳೆಯು ಆನ್‌ಲೈನ್ ಡೇಟಿಂಗ್ ಅಪ್ಲಿಕೇಶನ್ ಮೂಲಕ ಗುಣತಿಲಕ ಅವರೊಂದಿಗೆ ಹಲವಾರು ದಿನಗಳವರೆಗೆ ಮೇಸೆಜ್ ವಿನಿಮಯ ಮಾಡಿಕೊಂಡಿದ್ದಳು. ಇವರಿಬ್ಬರು ಬುಧವಾರ ಭೇಟಿಯಾಗಿದ್ದು, ಈ ವೇಳೆ ಮಹಿಳೆ ಮೇಲೆ ಗುಣತಿಲಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಶನಿವಾರ ಅಪರಾಧ ನಡೆದ ಸ್ಥಳ ಪರಿಶೀಲಿಸಲಾಗಿದ್ದು, ಗುಣತಿಲಕ ಅವರನ್ನು ಸಿಡ್ನಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!