ಹನೂರು: ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಭಾನುವಾರ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಬ್ ಇನ್ಸ್‍ಪೆಕ್ಟರ್ ರಾಜೇಂದ್ರ ಪ್ರಸಾದ್ ಮಾತನಾಡಿ, ಕನ್ನಡ ಭಾಷೆಯು ಪ್ರೌಢಿಮೆಯನ್ನು ಹೊಂದಿದ್ದು, ಸುಮಾರು 2 ಸಾವಿರ ವರ್ಷಗಳ ಇತಿಹಾಸವನ್ನು ಹೊಂದಿದೆ. ಇತರೆ ಭಾಷೆಗಳಿಗೆ ಹೋಲಿಸಿದರೆ ಭಾಷೆಯು ಉತ್ಕಷ್ಟತೆಯನ್ನು ಪಡೆದಿದ್ದು, ಹೆಗ್ಗಳಿಕೆಯನ್ನು ಗಳಿಸಿದೆ. ಆಗಾಗಿ ಕರ್ನಾಟದಲ್ಲಿ ಕನ್ನಡಿಗರೇ ಸಾರ್ವಭೌಮರು. ಈ ದಿಸೆಯಲ್ಲಿ ಕನ್ನಡ ನಾಡು ನುಡಿಯನ್ನು ಉಳಿಸಿ ಬೆಳೆಸುವಲ್ಲಿ ಆಟೋ ಚಾಲಕರು ಹೆಚ್ಚಿನ ಒತ್ತು ನೀಡಿರುವುದು ಮೆಚ್ಚುವಂತದ್ದು ಎಂದು ಪ್ರಶಂಸೆ ವ್ಯಕ್ತಪಡಿಸಿದರಲ್ಲದೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಚಾಲನಾ ಪರವಾನಿಗೆಯನ್ನು ಹೊಂದುವುದರ ಮೂಲಕ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಕಿವಿಮಾತು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾಜಪ್ಪ, ಉಪಾಧ್ಯಕ್ಷರಾದ ನಾರಾಯಣ್, ಶಂಕರ್, ಖಜಾಂಜಿ ಸೈಯದ್ ಸಲೀಂ, ಮುಖಂಡರಾದ ಪ್ರಕಾಶ್, ಕೂಸಪ್ಪ, ಎಲ್ ರಾಜೇಂದ್ರ, ನಾಗಣ್ಣ ಹಾಗೂ ಇನ್ನಿತರರು ಇದ್ದರು.





