Mysore
26
broken clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಉತ್ತರಕಾಂಡದಲ್ಲಿ ಡಾಲಿ ರಮ್ಯಾ ಜೋಡಿ, ಇಂದು ನೆರವೇರಿದ ಮುಹೂರ್ತ

ರತ್ನನ್ ಪ್ರಪಂಚ’ದ ನಿರ್ದೇಶಕ ರೋಹಿತ್ ಪದಕಿ ಚಿತ್ರವಿದು. ವಿಜಯ್ ಕಿರಗಂದೂರು ಹೊಂಬಾಳೆಯ ಅಂಗಸಂಸ್ಥೆ ಕೆ.ಆರ್.ಜಿ ಸಂಸ್ಥೆ ಚಿತ್ರವನ್ನು ನಿರ್ಮಿಸುತ್ತಿದ್ದು, ಮುಹೂರ್ತ ಭಾನುವಾರ ನೆರವೇರಿತು.

ಎಂಟು ವರ್ಷಗಳ ಬಳಿಕ ತಮಗೆ ಅತ್ಯಂತ ಆಪ್ತವಾದ ಕಥೆ ಹಾಗು ಪಾತ್ರ ‘ಉತ್ತರಕಾಂಡ’ ಕೊಟ್ಟಿರುವ ಕಾರಣ ಅದಕ್ಕೆ ಬೇಕಾದ ತಯಾರಿ ನಡೆಸಿದ್ದಾರೆ ರಮ್ಯಾ. ‘ರತ್ನನ್ ಪ್ರಪಂಚ’ ಚಿತ್ರಕ್ಕೆ ನಾಯಕಿಯ ಪಾತ್ರವನ್ನು ನನಗೆ ಕೇಳಿದಾಗ ಕಾರಣಾಂತರಗಳಿಂದ ಅದನ್ನು ಒಪ್ಪಿಕೊಳ್ಳಲಾಗಿರಲಿಲ್ಲ. ನನಗೆ ಅತ್ಯಂತ ಆಪ್ತವಾದ ಸಿನಿಮಾ ರತ್ನನ್ ಪ್ರಪಂಚ. ಅಂತಹ ಒಳ್ಳೆಯ ತಂಡದ ಜೊತೆ ಕೈ ಜೋಡಿಸಲು ಖುಷಿಯಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಈ ತಂಡದ ಜೊತೆಗಿನ ಒಡನಾಟ ಮತ್ತು ತಂಡದವರೆಲ್ಲರೂ ನನ್ನ ಮೇಲೆ ತೋರುತ್ತಿರುವ ಅಭಿಮಾನ ಒಳ್ಳೆಯ ಜಾಗದಲ್ಲಿರುವೆ ಎಂಬ ಭಾವನೆ ನೀಡುತ್ತಿದೆ ಎಂದು ರಮ್ಯಾ ಹೇಳಿದ್ದಾರೆ.

‘ಈ ಚಿತ್ರ ಮನುಷ್ಯನ ವಿಲಕ್ಷಣ ಮನಸ್ಸಿನ ಹೋರಾಟವನ್ನ ಬಿಂಬಿಸುತ್ತದೆ. ಸರಿ ತಪ್ಪುಗಳ ಸಿದ್ದಾಂತ, ಅಹಂಕಾರಗಳ ಗುದ್ದಾಟ. ಉತ್ತರಕರ್ನಾಟಕದ ಅದ್ಬುತ ಬದುಕಿನ ನಡುವೆ ನಡೆಯುವ ಕಥೆ ಹೇಳುತ್ತಿರುವುದು ನನಗೆ ದೊಡ್ಡ ಸವಾಲು ಮತ್ತು ಜವಾಬ್ದಾರಿ’ ಎಂದು ನಿರ್ದೇಶಕ ರೋಹಿತ್ ಪದಕಿ ಹೇಳಿದ್ದಾರೆ. ಚಿತ್ರ ಸಂಪೂರ್ಣ ಉತ್ತರಕರ್ನಾಟಕದ ಸೊಗಡಲ್ಲಿ, ಭಾಷೆಯಲ್ಲಿ ಇರುತ್ತದೆ ಹಾಗೂ ಅಲ್ಲಿಯೇ ಚಿತ್ರೀಕರಣವಾಗಲಿದೆ.

ಅರವಿಂದ ಕಶ್ಯಪ್ ಕ್ಯಾಮೆರಾ, ಚರಣ್ ರಾಜ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ