Mysore
20
clear sky

Social Media

ಮಂಗಳವಾರ, 03 ಮಾರ್ಚ್ 2026
Light
Dark

ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ

ಚಾ.ನಗರ, ಕೊಡಗು ಜಿಲ್ಲೆಗೆ ‘ಯಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಸೋಮವಾರದಿಂದ ೪ ದಿನಗಳು ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಭಾನುವಾರ ಗುಡುಗು ಸಹಿತ ಮಳೆಯಾಗಿದೆ.
ಚಾಮರಾಜನಗರ, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾವಾಂತರ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. ಚಾಮರಾಜನಗರ, ಮಂಡ್ಯ, ಕೊಡಗು, ಹಾಸನ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಬೀದರ್, ವಿಜುಂಪುರ, ಕಲಬುರಗಿ, ಜಿಲ್ಲೆಗಳಲ್ಲಿ ಚಳಿ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ವಾಹಿತಿ ನೀಡಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!