Mysore
23
overcast clouds

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

ಕೆಎಸ್‌ಸಿಎ ಅಧ್ಯಕ್ಷ ಸ್ಥಾನಕ್ಕೆ ರಘುರಾಮ್ ಭಟ್ ಸ್ಪರ್ಧೆ

ಬೆಂಗಳೂರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಎ. ರಘುರಾಮ್ ಭಟ್ ಅವರು ಸ್ಪರ್ಧಿಸುವ ಮೂಲಕ ನಾಮಪತ್ರವನ್ನು ಸಲ್ಲಿಸಿದ್ದಾರೆ.

ನವೆಂಬರ್ 20ರಂದು ನಿಗದಿಯಾಗಿರುವ ಕೆಎಸ್‌ಸಿಎ ಚುನಾವಣೆಗಾಗಿ ನಾಮಪತ್ರ ಸಲ್ಲಿಸಿದವರ ಪಟ್ಟಿಯನ್ನು ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

1980 ರಿಂದ 1993ರವರೆಗೆ ರಘುರಾಮ್ ಭಟ್ ಅವರು ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದಾರೆ. ಭಾರತ ತಂಡವನ್ನು ಎರಡು ಟೆಸ್ಟ್ ಪಂದ್ಯಗಳಲ್ಲಿ ಪ್ರತಿನಿಧಿಸಿದ್ದರು. ಕರ್ನಾಟಕ ತಂಡದಲ್ಲಿ ಎಡಗೈ ಸ್ಪಿನ್ನರ್ ಆಗಿ ಮಿಂಚಿದ್ದ ಅವರು 82 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿ 374 ವಿಕೆಟ್‌ಗಳನ್ನು ಗಳಿಸಿದ್ದಾರೆ. ನಿವೃತ್ತಿಯ ನಂತರ ಅಂಪೈರ್, ಕೋಚ್ ಮತ್ತು ರಾಜ್ಯ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸಿದ್ದಾರೆ. 64 ವರ್ಷ ರಘುರಾಮ್,  ಉಪಾಧ್ಯಕ್ಷ ಸ್ಥಾನಕ್ಕೂ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಹಿಂಪಡೆಯಲು ಬುಧವಾರ ಕೊನೆಯ ದಿನವಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!