Mysore
25
light rain

Social Media

ಶನಿವಾರ, 13 ಜೂನ್ 2026
Light
Dark

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ: ತಹಸಿಲ್ದಾರ್‌ ಆನಂದಯ್ಯ

ಹನೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಮಹಿಳಾ ಸಂಘಟನೆ ಮತ್ತು ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡುವ ಮೂಲಕ ಗ್ರಾಮೀಣ ಭಾಗದ ಮಹಿಳೆ ಮತ್ತು ರೈತರ ಆರ್ಥಿಕ ಸಬಲೀಕರಣ ಮಾಡುತ್ತಿರುವುದು ಸಂತಸದ ವಿಚಾರ ಎಂದು ತಹಸಿಲ್ದಾರ್ ಆನಂದಯ್ಯ ರವರು ತಿಳಿಸಿದರು.

ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಹನೂರು ತಾಲೂಕು ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಸಹಯೋಗದೊಂದಿಗೆ ಆಯೋಜಿಸಿದ್ದ ತಾಲೂಕು ಮಟ್ಟದ ಸ್ವ ಉದ್ಯೋಗ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಒಂದು ಹಳ್ಳಿಯಿಂದ ಪ್ರಾರಂಭವಾದ ಇವರ ಕೆಲಸ ಇಡೀ ರಾಜ್ಯಾದ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಮಹಿಳಾ ಸ್ವಸಹಾಯ ಸಂಘಗಳ ಮೂಲಕ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸರ್ಕಾರದ ಯೋಜನೆಯ ಸೌಲಭ್ಯಗಳನ್ನು ಕೊಡಿಸುವುದು, ಬ್ಯಾಂಕ್ ಸಾಲ, ಸಂಘದ ಪ್ರೋತ್ಸಾಹ ಧನ ಮುಂತಾದ ಸೌಲಭ್ಯಗಳನ್ನು ನೀಡುವ ಜೊತೆಗೆ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡಿ ಆರ್ಥಿಕ ಸ್ವಾವಲಂಬನೆಯ ಮೂಲಕ ಗ್ರಾಮೀಣ ಜನತೆಯಲ್ಲಿ ಆತ್ಮವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ ಎಂದರು.
ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ನಿರ್ದೇಶಕಿ ಲತಾ ಬಂಗೇರ, ಚಾಮರಾಜನಗರ ಜಿಲ್ಲಾ ಜನಜಾಗೃತಿ ಸದಸ್ಯ ಪ್ರಕಾಶ್ ನಾಯ್ಡು, ರುಡ್ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಪಾಲ್ ರಾಜು, ಮಾನವ ಸಂಪನ್ಮೂಲ ತರಬೇತಿ ಸಂಸ್ಥೆ ಉಪನ್ಯಾಸಕ ಹರೀಶ್, ಹನೂರು ತಾಲೂಕು ಯೋಜನಾಧಿಕಾರಿಗಳು ಮತ್ತು ತಾಲೂಕಿನ ವಿವಿಧ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!