Hilliard
0
light snow

Social Media

ಶನಿವಾರ, 21 ಡಿಸೆಂಬರ್ 2024
Light
Dark

ಶವಾಗಾರದಲ್ಲಿ ವಿಕೃತಿ ಮೆರೆದ ಸಿಬ್ಬಂದಿ

 ಮಡಿಕೇರಿ ನಗರ ಪೊಲೀಸ್ ಠಾಣೆಗೆ ದೂರು

ಮಡಿಕೇರಿ: ಮರಣೋತ್ತರ ಪರೀಕ್ಷೆ ನಡೆಸಲು ಇರುವ ಜಾಗದಲ್ಲಿ ಸಿಬ್ಬಂದಿಯೊಬ್ಬ ಕಾಮದಾಟ ನಡೆಸುತ್ತಿರುವ ಅರೋಪ ಕೇಳಿ ಬಂದಿದೆ. ಅಲ್ಲದೆ, ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋಗಳನ್ನು ತನ್ನ ಮೊಬೈಲ್‌ನಲ್ಲಿ ತೆಗೆದು ವಿಕೃತಿ ಮೆರೆದಿರುವ ಆರೋಪದಡಿ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಡಿಕೇರಿಯ ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಡಿಕೇರಿ ತಾಲೂಕಿನ ಕಡಗದಾಳು ಗ್ರಾಮದ ಸೈಯ್ಯದ್ ಎಂಬಾತನೇ ಹೇಯ ಕೃತ್ಯ ಎಸಗಿರುವ ಆರೋಪಿ.

ಸಯ್ಯದ್ ೨೦೨೧ರ ಏಪ್ರಿಲ್ ತಿಂಗಳಿನಲ್ಲಿ ಗುತ್ತಿಗೆ ಆಧಾರದಲ್ಲಿ ಶವಾಗಾರದ ಅಟೆಂಡರ್ ಆಗಿ ಕೆಲಸಕ್ಕೆ ಸೇರಿದ್ದ. ಕೋವಿಡ್ ಸಂದರ್ಭದಲ್ಲಿ ಈತ ತುಂಬಾ ಶ್ರಮಪಟ್ಟು ಕೆಲಸ ಮಾಡಿದ್ದಾನೆ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಸನ್ಮಾನ ಕೂಡಾ ಮಾಡಿದ್ದರು. ಹೊರಪ್ರಪಂಚಕ್ಕೆ ಗೊತ್ತಾಗದ ರೀತಿಯಲ್ಲಿ ಸೈಯದ್ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಕೆಲವು ಮಹಿಳೆಯರನ್ನು ಫೋನ್ ಕರೆಮಾಡಿ ಶವಾಗಾರಕ್ಕೆ ಕರೆಸಿಕೊಳ್ಳುತ್ತಿದ್ದ ಎನ್ನಲಾಗಿದೆ. ಅಷ್ಟೇ ಅಲ್ಲದೇ ಅಪಘಾತ ಸೇರಿದಂತೆ ನಾನಾ ರೀತಿಯಲ್ಲಿ ಸತ್ತು ಶವಾಗಾರಕ್ಕೆ ಸೇರುತ್ತಿದ್ದ ಮಹಿಳೆಯರ ನಗ್ನ ಫೋಟೋಗಳನ್ನು ತೆಗೆದು ತನ್ನ ಮೊಬೈಲ್‌ನಲ್ಲೂ ಇಟ್ಟುಕೊಂಡಿರುವ ಆರೋಪ ಕೇಳಿ ಬಂದಿದೆ.

ಸೈಯದ್ ತಿಂಗಳ ಹಿಂದೆ ಮಡಿಕೇರಿ ನಗರದ ಮನೆಯೊಂದಕ್ಕೆ ನುಗ್ಗಲು ಯತ್ನಿಸಿದ್ದು, ಈ ವೇಳೆ ಜನರಿಗೆ ಸಿಕ್ಕಿಬಿದ್ದಿದ್ದ. ಸ್ಥಳೀಯರು ಸೈಯದ್ ಮೊಬೈಲ್‌ನ್ನು ಪೊಲೀಸ್ ವಶಕ್ಕೆ ನೀಡಿದ್ದರು. ಆತನ ಫೋನ್ ಕರೆಗಳನ್ನು ಪರಿಶೀಲಿಸಿದಾಗ ಆತನ ಯಾರೊಂದಿಗೆಲ್ಲಾ, ಏನೆಲ್ಲಾ ಮಾತನಾಡಿದ್ದಾನೆ ಎಂಬುವುದು ತಿಳಿದು ಬಂದಿದೆ.

ಯಾರಾದರೂ ಮಹಿಳೆಯರು, ಹೆಣ್ಣುಮಕ್ಕಳು ಸತ್ತು ಅವರ ಮೃತದೇಹಗಳನ್ನು ಶವಾಗಾರಕ್ಕೆ ಹಾಕಿದರೆ, ಪೋಸ್ಟ್ ಮಾರ್ಟಂಗೂ ಮೊದಲೇ ಈ ಕಿರಾತಕ ಆ ಸತ್ತ ಮಹಿಳೆಯರ, ಹೆಣ್ಣುಮಕ್ಕಳ ಬೆತ್ತಲೇ ಮೃತದೇಹಗಳ ಫೋಟೋಗಳನ್ನು ತನ್ನ ಮೊಬೈಲ್‌ನಲ್ಲಿ ತೆಗೆದುದಿಟ್ಟುಕೊಳ್ಳುತ್ತಿದ್ದ ಎನ್ನುವ ಘೋರ ವಿಷಯವೂ ಗೊತ್ತಾಗಿದೆ. ಅಷ್ಟೇ ಅಲ್ಲದೇ ಸಾಕಷ್ಟು ಹೆಣ್ಣು ಮಕ್ಕಳು, ಮಹಿಳೆಯರನ್ನು ಸಯ್ಯದ್ ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಎನ್ನುವುದು ಗೊತ್ತಾಗಿದೆ.

ಹಿಂದೂ ಜಾಗರಣಾ ವೇದಿಕೆಯು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ನಿರ್ದೇಶಕ ಹಾಗೂ ಡೀನ್‌ಗೆ ಈತನ ವಿರುದ್ಧ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೆಡಿಕಲ್ ಕಾಲೇಜು ಡೀನ್ ಕಾರಿಯಪ್ಪ ಅವರು ಸಯ್ಯದ್ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಗೆ ನೀಡಿದ್ದಾರೆ. ಮಡಿಕೇರಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ