Mysore
22
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ಹೊಟ್ಟೆ ನೋವು ತಾಳಲಾರದೆ ಯುವಕ ಸಾವಿಗೆ ಶರಣು

ಮೈಸೂರು: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕರೊಬ್ಬರು ನೋವಿನಿಂದ ಬೇಸತ್ತು ನೇಣಿಗೆ ಶರಣಾಗಿದ್ದಾರೆ.
ಕ್ಯಾತಮಾರನಹಳ್ಳಿ ನಿವಾಸಿ ಸುನಿಲ್(೨೪) ಆತ್ಮಹತ್ಯೆ ಮಾಡಿಕೊಂಡವರು. ಮೂರು ವರ್ಷಗಳ ಹಿಂದೆ ಕ್ಯಾತಮಾರನಹಳ್ಳಿ ನಿವಾಸಿ ಕಾವ್ಯ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ ಸುನಿಲ್‌ಗೆ ಒಂದು ವರ್ಷದ ಮಗು ಇತ್ತು. ಗ್ಯಾಸ್ಟ್ರಿಕ್‌ನಿಂದ ಬಳಲುತ್ತಿದ್ದ ಸುನಿಲ್ ಹಲವು ದಿನಗಳಿಂದ ಆಹಾರವನ್ನೂ ತ್ಯಜಿಸಿದ್ದರು. ಸಾಕಷ್ಟು ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗಿರಲಿಲ್ಲ. ಗುರುವಾರ ಹೆಂಡತಿ ಮತ್ತು ಮಗವನ್ನು ತವರು ಮನೆಗೆ ಕಳುಹಿಸಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!