Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಗ್ರಾಮ ಪಂಚಾಯಿತಿ ಸದಸ್ಯರು ಸೇರಿ ಹಲವರು ಜೆಡಿಎಸ್‌ ಸೇರ್ಪಡೆ

ಹನೂರು: ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಪಕ್ಷಕ್ಕೆ ಬಂದಿರುವ ಗ್ರಾ ಪಂ ಸದಸ್ಯರುಗಳು ಹಾಗೂ ಕಾರ್ಯಕರ್ತರುಗಳಿಗೆ ಅಭಾರಿಯಾಗಿದ್ದೇನೆ ಎಂದು ಜೆಡಿಎಸ್ ಮುಖಂಡ ಎಂಆರ್ ಮಂಜುನಾಥ್ ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯ ದೊಡ್ಡಿಂದುವಾಡಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸೇರಿದಂತೆ ಕಾರ್ಯಕರ್ತರು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹನೂರು ಕ್ಷೇತ್ರದ ಮತದಾರರು ನನ್ನ ಮೇಲಿನ ವಿಶ್ವಾಸಕ್ಕೆ 44 ಸಾವಿರ ಮತ ನೀಡಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದ್ದೀರಿ, ಕ್ಷೇತ್ರದಲ್ಲಿ ನಮ್ಮ ಸಂಘಟನೆಯನ್ನು ಮೆಚ್ಚಿ ಸಾವಿರಾರು ಅನ್ಯ ಪಕ್ಷದ ಕಾರ್ಯಕರ್ತರು ಜೆಡಿಎಸ್ ಪಕ್ಷ ಸೇರುತ್ತಿರುವುದರಿಂದ ಪಕ್ಷ ಸಂಘಟನೆಗೆ ಸಹಕಾರಿಯಾಗಲಿದೆ. ಮುಂದಿನ ಚುನಾವಣೆಯಲ್ಲಿ ಮತದಾರರು ನನಗೆ ಒಂದು ಅವಕಾಶ ನೀಡಿದ್ದೇ ಆದಲ್ಲಿ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ, ಕಳೆದ ಚುನಾವಣೆಯಲ್ಲಿ ಪರಾಭವಗೊಂಡರೂ ನಿಮ್ಮ ಕಷ್ಟ ಸುಖಗಳಿಗೆ ಭಾಗಿಯಾಗಿದ್ದೇನೆ. ಮುಂದಿನ ದಿನಗಳಲ್ಲೂ ಸಹ ನನ್ನ ಸಹಕಾರ ಎಂದಿಗೂ ಇರುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಶಿವರಾಮು,ಕಾಂಗ್ರೆಸ್ ಕಾರ್ಯಕರ್ತರು ಗಳಾದ ಮುತ್ತುರಾಜು, ತಿಮ್ಮಯ್ಯ, ಚಾಮರಾಜು, ಮಂಟೇಸ್ವಾಮಿ, ತಿಮ್ಮಣ್ಣ, ಚಿಕ್ಕಣ್ಣ, ರವಿ ಕೆಂಪರಾಜು, ಸತೀಶ್, ಕೆಂಪಣ್ಣ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರುಗಳಾದ ಜಿ ಪಂ ಮಾಜಿ ಉಪಾಧ್ಯಕ್ಷ ಶಿವಮೂರ್ತಿ, ಬಾಬು, ಮಂಜೇಶ್, ಜಸೀಂಪಾಶಾ, ಚಿನ್ನವೆಂಕಟ,ಕೆಂಪರಾಜು ಸುಂದರರಾಜ್ ಸೇರಿದಂತೆ ಇನ್ನಿತರರು ಹಾಜರಿದ್ದರು

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ