Mysore
27
overcast clouds

Social Media

ಶನಿವಾರ, 04 ಜುಲೈ 2026
Light
Dark

ನಾಳೆ ಮಧುಮೇಹ ಜಾಗೃತಿಗಾಗಿ ವಾಕಥಾನ್

ಮೈಸೂರು: ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನಗರದ ಭಾನವಿ ಆಸ್ಪತ್ರೆ ವತಿಯಿಂದ ಮಧುಮೇಹ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನ.೧೪ರಂದು ಬೆಳಿಗ್ಗೆ ೭ ಗಂಟೆಗೆ ‘ವಾಕಥಾನ್’ ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ಮಧುಮೇಹ ತಜ್ಞ ಡಾ.ಎಚ್.ಎನ್.ಚಂದನ್‌ಕುಮಾರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಆಸ್ಪತ್ರೆಯಲ್ಲಿ ವಿಶೇಷ ದರದಲ್ಲಿ ಮಧುಮೇಹ ಆರೋಗ್ಯ ತಪಾಸಣಾ ಪ್ಯಾಕೇಜ್ ಶಿಬಿರ ನಡೆಯಲಿದೆ ಎಂದು ಹೇಳಿದರು.
ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಎನ್.ವಿಜಯ ಚೆಲುವರಾಜ್, ಡಾ.ದೀಪಕ್ ಬಿ.ಗೌಡ, ಕೆ.ಎನ್.ನಿರಂಜನ್ ಸ್ವಾಮಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!