ಚಾಮರಾಜನಗರ: ಜಿಲ್ಲಾ ವಕೀಲರ ಸಂಘದಿಂದ ಇಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ರವಿ ವೆಂಕಪ್ಪ ಹೊಸಮನಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮಾತನಾಡಿ, ನ್ಯಾಯಾಲಯ ಸಂಕೀರ್ಣಕ್ಕೆ ಮತ್ತು ವಕೀಲರ ಸಂಘಕ್ಕೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ನ್ಯಾಯಮೂರ್ತಿಗಳಿಗೆ ಮನವಿ ಮಾಡಿದರು.
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎನ್. ಕೆ.ವಿರೂಪಾಕ್ಷಸ್ವಾಮಿ, ಜಂಟಿ ಕಾರ್ಯದರ್ಶಿ ಮಲ್ಲು, ಖಜಾಂಚಿ ಆರ್.ಗಿರೀಶ್, ಹಿರಿಯ ವಕೀಲರಾದ ಪುಟ್ಟರಾಜು, ಎಂ.ಶಿವಲಿಂಗಗೌಡ, ಎಂ.ಚಿನ್ನಸ್ವಾಮಿ ಮೊದಲಾದವರು ಹಾಜರಿದ್ದರು.





