Mysore
20
clear sky

Social Media

ಭಾನುವಾರ, 08 ಮಾರ್ಚ್ 2026
Light
Dark

ನೀರಿನಲ್ಲಿ ಮುಳುಗಿ ರಾಷ್ಟ್ರಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಸಾವು

ಮಂಡ್ಯ: ರಾಷ್ಟ್ರಮಟ್ಟದ  ಸೈಕ್ಲಿಂಗ್ ಕ್ರೀಡಾಪಟು ನಾಲೆಯಲ್ಲಿ ಈಜಲು ಹೋಗಿ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಬಳಿ ನಡೆದಿದೆ.
ಪಾಂಡಿಚೇರಿ ಮೂಲ ನಿವಾಸಿ, ಸೈಕ್ಲಿಂಗ್ ಕ್ರೀಡಾಪುಟು ಆಲ್‌ಹರ್ಶ್ (೧೭) ಮೃತ ವ್ಯಕ್ತಿ.
ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಷ್ಟ್ರ ಮಟ್ಟದ ಸೈಕಲ್ ಪೋಲೋ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಈ ಕ್ರೀಡಾಕೂಟಕ್ಕೆ ರಾಜ್ಯ, ಹೊರ ರಾಜ್ಯದಿಂದ ಸೈಕ್ಲಿಂಗ್ ಕ್ರೀಡಾಪಟುಗಳು ಆಗಮಿಸಿದ್ದರು ಎನ್ನಲಾಗಿದೆ. ಕ್ರೀಡಾಕೂಟದ ಅಣತಿ ದೂರದ ನಾಲೆ ಬಳಿ ಈಜಲು ಹೋಗಿದ್ದ ವೇಳೆ ಆಲ್ ಹರ್ಶ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಶೋಧ ಕಾರ್ಯ ನಡೆಸಿ ನಾಲೆಯಿಂದ ಕ್ರೀಡಾಪಟು ಆಲ್ ಹರ್ಶ್ ಮೃತದೇಹವನ್ನು ಹೊರತೆಗೆದಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತಂತೆ ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!