Mysore
25
few clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಅಮೆಜಾನ್‌ ಉದ್ಯೋಗಿಗಳ ಕೆಲಸಕ್ಕೆ ಕುತ್ತು: 10 ಸಾವಿರ ಉದ್ಯೋಗಿಗಳಿಗಿಲ್ಲ ಕೆಲಸ.

ಬೆಂಗಳೂರು ; ಬೃಹತ್ ಇ ಕಾಮರ್ಸ್ ಅಮೆಜಾನ್ ತನ್ನ ಉದ್ಯೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ಮುಂದಾಗಿದೆ.‌ ಸಾಮಾಜಿಕ ಜಾಲತಾಣದ ದೊಡ್ಡ  ಕಂಪನಿಗಳಲ್ಲಿ ಒಂದಾದ ಟ್ವಿಟರ್ ಉದ್ಯೋಗ ಕಡಿತ ಮಾಡಿದ ಬೆನ್ನಲ್ಲೇ ಅಮೆಜಾನ್ ಉದ್ಯೋಗಿಗಳ ಸಂಖ್ಯೆಗೆ ಬ್ರೇಕ್ ಹಾಕಲು ನಿರ್ಧರಿಸಿದೆ. ಸುಮಾರು 10 ಸಾವಿರ ಉದ್ಯೋಗ ಕಡಿತಕ್ಕೆ ಅಮೆಜಾನ್ ಮುಂದಾಗಿದೆ ಎಂಬ ಮಾಹಿತಿ ಹೊರ ಬಿದ್ದಿದೆ. ಕಳೆದ ಕೆಲವು ತ್ರೈಮಾಸಿಕದಲ್ಲಿ ನಿರೀಕ್ಷಿತ ಲಾಭ ಕಾಣದೇ ಈ ಕ್ರಮಕ್ಕೆ ಮುಂದಾಗಲಾಗಿದೆ ಎನ್ನಲಾಗಿದೆ. ಒಂದು ವೇಳೆ 10 ಸಾವಿರ ಉದ್ಯೋಗಗಳನ್ನು ಕಡಿತಗೊಳಿಸಿದ್ದಲ್ಲಿ ಅಮೆಜಾನ್​ ಇತಿಹಾಸದಲ್ಲೇ ಇದು ಬಹು ದೊಡ್ಡ ಉದ್ಯೋಗ ಕಡಿತವಾಗಲಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ