Mysore
26
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಸ್ವಮೂತ್ರ ಪಾನ ವಿಷಯ ಪಠ್ಯದಿಂದ ತೆಗೆಯದಿದ್ದಲ್ಲಿ ಹೋರಾಟ : AIDSO

ಮೈಸೂರು: ಹೊಸ ರಾಷ್ಟ್ರೀಯ   ಶಿಕ್ಷಣ ನೀತಿ ಪಠ್ಯಕ್ರಮದ ಅನ್ವಯ ಮೈಸೂರು ವಿಶ್ವವಿದ್ಯಾನಿಲಯ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಏಡ್ಸ್, ಕ್ಯಾನ್ಸರ್‌ಗೆ ಸ್ವಮೂತ್ರ ಪಾನವೇ ಮದ್ದು ಎಂದು ದಾಖಲಾಗಿದ್ದು, ಇದು ಅತ್ಯಂತ ಅವೈಜ್ಞಾನಿಕ ಮತ್ತು ಮೂರ್ಖತನದ ಪರಮಾವಧಿ ಎಂದು ಎಐಡಿಎಸ್‌ಓ ಜಿಲ್ಲಾ ಅಧ್ಯಕ್ಷ ಸುಭಾಷ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೂತ್ರ ಚಿಕಿತ್ಸೆಯ ಪ್ರಕೃತಿ ಚಿಕಿತ್ಸೆಯು ಒಂದು ಭಾಗ. ಸ್ವಪಾನದಿಂದ ಏಡ್ಸ್, ಕ್ಯಾನ್ಸರ್, ಕಣ್ಣು, ಕಿವಿ, ಹಲ್ಲು ಹಾಗೂ ಚರ್ಮರೋಗಗಳನ್ನು ನಿಯಂತ್ರಿಸಬಹುದು ಎಂಬ ಅವೈಜ್ಞಾನಿಕವಾದ ಅಂಶಗಳನ್ನು ವಿಶ್ವವಿದ್ಯಾನಿಲಯದ ಪಠ್ಯಕ್ರಮದಲ್ಲಿ ಅಳವಡಿಸಿರುವುದು ದುರಂತವೇ ಸರಿ. ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ವೈಜ್ಞಾನಿಕವಾಗಿ ಸಾಬೀತಾಗಿರುವ ಅಂಶಗಳನ್ನು ಸೇರಿಸಬೇಕೇ ಹೊರತು, ಕೇವಲ ಪ್ರಾಚೀನ ಗ್ರಂಥಗಳನ್ನು ಉಲ್ಲೇಖ ಮಾಡಿ ಈ ರೀತಿ ಪಠ್ಯಗಳನ್ನು ರಚಿಸಿರುವುದನ್ನು ಈ ಕೂಡಲೇ ವಾಪಸ್ ಪಡೆಯಬೇಕು. ಈ ಕೂಡಲೇ ವಿಶ್ವವಿದ್ಯಾನಿಲಯದ ಪದಾಧಿಕಾರಿಗಳು ಹಾಗೂ ಸರ್ಕಾರವೇ ಮಧ್ಯ ಪ್ರವೇಶಿಸಿ ಅವೈಜ್ಞಾನಿಕ ಪಠ್ಯಕ್ರಮವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಬೃಹತ್ ಹೋರಾಟ ಎದುರಿಸಬೇಕಾಗುತ್ತದೆ ಎಂದು ಎಐಡಿಎಸ್‌ಓ ಎಚ್ಚರಿಕೆ ನೀಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!