Mysore
19
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ಡಿಸಿ ನಡೆ ಕಾರ್ಯಕ್ರಮದಲ್ಲಿ ಪಿಡಿಒ ಬದಲಾವಣೆಗೆ ಒತ್ತಾಯ

ಗುಂಡ್ಲುಪೇಟೆ: ತಾಲ್ಲೂಕಿನ ವೀರನಪುರ ಗ್ರಾಮದಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆʼ ಕಾರ್ಯಕ್ರಮವನ್ನು  ತಹಸಿಲ್ದಾರ್ ರವಿಶಂಕರ್ ನೇತೃತ್ವದಲ್ಲಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಜಲಜೀವನ್ ಯೋಜನೆ ಕಾಮಗಾರಿ ಸರಿಯಾಗಿ ಮಾಡಿಲ್ಲ ಹಾಗೂ ಡೀಪ್ ಮಾಡದೆ ಮೇಲೆ ಪೈಪ್ ಲೈನ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತು. ಪಿಡಿಒ ಸರಿಯಾಗಿ ಜನಸಾಮಾನ್ಯರಿಗೆ ಸ್ಪಂದಿಸುತ್ತಿಲ್ಲ, ಕೂಡಲೇ ಅವರನ್ನು ಬದಲಾಯಿಸಿ ಎಂಬ ಒತ್ತಾಯವೂ ಕೇಳಿಬಂದಿತು.
ಪೌತಿ ಖಾತೆ, ಪಿಂಚಣಿ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಅರ್ಜಿಗಳನ್ನು ಸಲ್ಲಿಸಿದರು.

ತಹಸಿಲ್ದಾರ್ ರವಿಶಂಕರ್ ಮಾತನಾಡಿ, ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ನಿಮ್ಮ ಸಮಸ್ಯೆ ಬಗೆಹರಿಸಲಿದ್ದಾರೆ. ಅರ್ಜಿಗಳನ್ನು ಸ್ವೀಕರಿಸಿ ನಿಮ್ಮ ಸಮಸ್ಯೆಗೆ ಪರಿಹಾರ ನೀಡಲಾಗುವುದು ಎಂದರು.
ತಾಪಂ ಇಓ ಶ್ರೀಕಂಠರಾಜೇ ಅರಸ್, ಬಿಇಓ ಶಿವಮೂರ್ತಿ, ವೈದ್ಯೆ ಪುಷ್ಪಲತಾ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ್, ತೋಟಗಾರಿಕೆ ಸಹಾಯಕ ನಿರ್ದೇಶಕ ರಾಜು, ಗ್ರಾ.ಪಂ. ಸದಸ್ಯ ಗುರುಪ್ರಸಾದ್, ಮುಖಂಡರುಗಳಾದ ಶಿವಮಲ್ಲಪ್ಪ, ಮಹದೇವಪ್ಪ, ಶಿವನಾಗಪ್ಪ, ಪರಮೇಶ್ವರಪ್ಪ, ನಾಗಪ್ಪ, ಬಸವಣ್ಣ ಮತ್ತಿತರರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!