Mysore
25
mist

Social Media

ಶನಿವಾರ, 19 ಅಕ್ಟೋಬರ್ 2024
Light
Dark

ಅಧಿಕಾರಿಗಳ ನಿರ್ಲಕ್ಷ್ಯ ಕಾರ್ಯವೈಖರಿಗೆ ಕಿಡಿ

ಮಿಣ್ಯಂನಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ

ಹನೂರು: ಭೂ ಮಾಪನ, ಲೋಕೋಪಯೋಗಿ ಹಾಗೂ ನೀರಾವರಿ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯ ಕಾರ್ಯವೈಖರಿಯ ಬಗ್ಗೆ ಶಾಸಕ ಆರ್.ನರೇಂದ್ರ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರಲ್ಲದೇ ಮಿಣ್ಯಂ ಭಾಗಕ್ಕೆ ಸಮರ್ಪಕ ಬಸ್ ಕಲ್ಪಿಸದಿರುವುದು ಹಾಗೂ ಆಂಬುಲೆನ್ಸ್ ಸೇವೆ ದೊರಕದಿರುವುದರ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ತಾಲೂಕಿನ ಕೆ.ಎಸ್ ದೊಡ್ಡಿ ಗ್ರಾಮದ ಮಿಣ್ಯಂ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ಧ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹೂಗ್ಯಂ ಗ್ರಾಮದಲ್ಲಿ ೨೭೦೦ ಎಕರೆ ಜಮೀನಿನಲ್ಲಿ ಅಳತೆಯಲ್ಲಿ ವ್ಯತ್ಯಾಸವಿದ್ದು, ಇಲ್ಲಿ ಕೃಷಿ ಮಾಡುತ್ತಿರುವ ರೈತರು ತುಂಬಾ ತೊಂದರೆ ಎದುರಿಸುತ್ತಿದ್ದಾರೆ. ಆದ್ದರಿಂದ ಅಳತೆ ಕಾರ್ಯ ನಡೆಸಿ ತಿದ್ದುಪಡಿ ಮಾಡಿ ಸಾಗುವಳಿ ಚೀಟಿ ನೀಡಬೇಕಿದೆ ಎಂದರು.
ನಾಗಣ್ಣ ನಗರದಲ್ಲೂ ಸಹ ರೈತರು ಇಂತಹ ಸಮಸ್ಯೆ ಎದುರಿಸುತ್ತಿದ್ದಾರೆ. ಆದ್ದರಿಂದ ಸರ್ವೆ ಮಾಡಿಸಿ ಖಾತೆ ನೀಡಬೇಕಿದೆ. ಈ ಬಗ್ಗೆ ಸರ್ವೇ ಇಲಾಖೆಯ ಅಧಿಕಾರಿಗಳಿಗೆ ಕಳೆದ ನಾಲೈದು ವರ್ಷಗಳಿಂದಲೂ ತಿಳಿಸುತ್ತಾ ಬರಲಾಗಿದೆ. ಆದರೆ ಕೆಲಸ ಮಾತ್ರ ಅಗಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಜತೆಗೆ ಈ ಭಾಗದಲ್ಲಿ ೩ ಗ್ರಾಮದಲ್ಲಿನ ಹಳ್ಳಗಳಿಗೆ ಸೇತುವೆ ನಿರ್ಮಿಸುವ ಸಂಬAಧ ಕ್ರಿಯಾಯೋಜನೆ ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿದೆ. ಇನ್ನು ಕೊಪ್ಪದಿಂದ ಸತ್ಯಮಂಗಲ ಗ್ರಾಮದ ರಸ್ತೆಗೆ ಅನುದಾನ ನೀಡಿ ೩ ವರ್ಷವಾಗಿದೆ. ಅದರೆ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಿಣ್ಯಂ ಗ್ರಾಮದ ಭಾಗಕ್ಕೆ ಸಮರ್ಪಕ ಬಸ್ ಸೌಕರ್ಯವಿಲ್ಲ. ರಾತ್ರಿ ವೇಳೆ ಆಸ್ಪತ್ರೆಯಲ್ಲಿ ವೈದ್ಯರು ಸಿಗಲ್ಲ. ೧೦೮ ತುರ್ತು ವಾಹನದ ಸೇವೆ ದೊರಕುತ್ತಿಲ್ಲ. ಇದರ ಜೊತೆಗೆ ವಿದ್ಯುತ್ ಕೇಬಲ್‌ಗಳು ಆಗಾಗ್ಗೆ ದುರಸ್ತಿಗೊಂಡು ವಿದ್ಯುತ್ ಕಡಿತವಾಗುತ್ತಿದೆ. ಅಲ್ಲದೇ ಜಲಜೀವನ ಮಿಷನ್ ಯೋಜನೆಯಡಿ ರಸ್ತೆಗಳನ್ನು ಅಗೆದು ಹಾಳು ಮಾಡಲಾಗುತ್ತಿದೆ. ಆದರೆ ಸಂಬAಧಪಟ್ಟ ಅಧಿಕಾರಿಗಳು ಕ್ರಮ ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದರು.
ಬಳಿಕ ಸಭೆಯಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ಡಿ.ಎಸ್ ರಮೇಶ್ ಅವರು ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು. ಅಲ್ಲದೇ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಜನರಿಗೆ ಭರವಸೆ ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ