Mysore
29
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

ಗೋಮೂತ್ರದಿಂದ ನೀರಿನ ಟ್ಯಾಂಕ್ ಶುದ್ದಿ: ವರದಿ ನಂತರ ಕ್ರಮ ಎಂದ ವಿ.ಸೋಮಣ್ಣ

ಚಾಮರಾಜನಗರ: ತಾಲ್ಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮಹಿಳೆ ನೀರು ಕುಡಿದರು ಎಂಬ ಕಾರಣಕ್ಕೆ ನೀರು ಸರಬರಾಜು ಟ್ಯಾಂಕ್ ನೀರು ಖಾಲಿ ಮಾಡಿ ಗೋಮೂತ್ರದಿಂದ ಶುದ್ಧೀಕರಣ ಮಾಡಿದ್ದಾರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳಿಂದ ಮಾಹಿತಿ ತರಿಸಿ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ‘ಶನಿವಾರ ಸಂಜೆ ಮಾಹಿತಿ ಸಿಕ್ಕಿತು. ತಕ್ಷಣವೇ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಕಳುಹಿಸಿದ್ದೇನೆ. ಜಿಲ್ಲಾಧಿಕಾರಿ ಗಮನಕ್ಕೂ ತಂದಿದ್ದೇನೆ. ವಾಸ್ತವಾಂಶ ಏನು ಎಂದುದು ಗೊತ್ತಿಲ್ಲ. ಈ ಬಗ್ಗೆ ಅಧಿಕಾರಿಗಳಿಂದ ವರದಿ ತರಿಸುತ್ತೇನೆ’ ಎಂದರು.

‘ಇದು ನೋವಿನ ಸಂಗತಿ. ಇಂತಹದ್ದು ನಡೆಯಬಾರದು. ಎಲ್ಲರೂ ಒಂದೇ ತಕ್ಕಡಿಯಲ್ಲಿ ಬದುಕಬೇಕಾಗುತ್ತದೆ’ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!