Mysore
21
few clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ನಟ ಚೇತನ್‌ನನ್ನು ಪಾಕಿಸ್ತಾನಕ್ಕೆ ಕಳಿಸಲು ಮೈಸೂರಿನ ರಾಷ್ಟ್ರೀಯ ಹಿಂದೂ ಸಮಿತಿಯಿಂದ ನೂತನ ಅಭಿಯಾನ

ಮೈಸೂರು: ಕೆಲ ದಿನಗಳ ಹಿಂದೆ ಪಾಕಿಸ್ತಾನ ಜಿಂದಾಬಾದ್​ ಎಂದು ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಬೆಂಬಲಿಸಿ ನಟ ಚೇತನ್ ಅಹಿಂಸಾ ಪೋಸ್ಟ್​ ಹಾಕಿದ್ದರು. ಇದರ ವಿರುದ್ದ ಮೈಸೂರಿನ ರಾಷ್ಟ್ರೀಯ ಹಿಂದೂ ಸಮಿತಿಯಿಂದ, ಅಗ್ರಹಾರದ ಪ್ರಮುಖ‌ ರಸ್ತೆ ಅಂಗಡಿಗೆ ತೆರಳಿ ಪೇ ಚೇತನ್ ಪೋಟೋ ಹಿಡಿದು ದೇಣಿಗೆ ಸಂಗ್ರಹ ಮಾಡುತ್ತಿದ್ದಾರೆ. ಚೇತನ್ ನಮ್ಮ ದೇಶದಲ್ಲಿ ಇರಲು ಯೋಗ್ಯನಲ್ಲ ಆತನನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು ಎನ್ನುವ ಅಭಿಯಾನವನ್ನು ಶುರು ಮಾಡಿದ್ದಾರೆ.

ನಟ ಚೇತನ್ ಅಹಿಂಸಾ ತಮ್ಮ ವಿವಾದಾತ್ಮಕ ಹೇಳಿಕೆಗಳನ್ನು ನೀಡುವುದರ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಕಾಂತಾರ ಸಿನಿಮಾದ ಬಗ್ಗೆ ಮಾತನಾಡಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದರು. ಇದೀಗ 5 ದಿನಗಳ ಹಿಂದೆ(ನ.17) ಬೆಂಗಳೂರಿನ ನ್ಯೂ ಹೊರೈಜನ್​ ಕಾಲೇಜಿನ ಇಂಜಿನಿಯರಿಂಗ್​ ವಿದ್ಯಾರ್ಥಿಗಳು ಪಾಕಿಸ್ತಾನ್​ ಜಿಂದಾಬಾದ್​ ಎಂದು ಘೋಷಣೆ ಕೂಗಿದ್ದರು ಅವರನ್ನು ಬೆಂಬಲಿಸುವ ಮೂಲಕ ಮತ್ತೆ ವಿವಾದವನ್ನು ತಮ್ಮ ಮೇಲೆ ಎಳೆದುಕೊಂಡಿದ್ದಾರೆ.

ಚೇತನ್​ ಅಹಿಂಸಾ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ‘ಕಾಲೇಜ್​ ಫೆಸ್ಟ್​ನಲ್ಲಿ ಬೆಂಗಳೂರಿನ 3 ವಿದ್ಯಾರ್ಥಿಗಳು ಪಾಕಿಸ್ತಾನ್​ ಜಿಂದಾಬಾದ್​ ಘೋಷಣೆ ಕೂಗಿದ್ದಾರೆ. ಇದನ್ನು ಅವರು ವಿನೋದಕ್ಕಾಗಿ ಮಾಡಲಾಗಿದೆ. ಈ ಕಾರಣಕ್ಕೆ ಆರ್ಯನ್​, ರಿಯಾ ಮತ್ತು ದಿನಕರ್​ ಅವರನ್ನು ಥಳಿಸಿ ಬೆದರಸಿ ಪೊಲೀಸ್​ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಇದು ಅಸಮಬದ್ಧ ಮತ್ತು ಅಪಾಯಕಾರಿ. ಪಾಕಿಸ್ತಾನದ ಜನರು ನಮ್ಮ ಸಹೋದರಿಯರು ಮತ್ತು ಸಹೋದರರಂತೆ ಅವರು ನಮ್ಮ ಶತ್ರುಗಳಲ್ಲ. ವಾಕ್​ ಸ್ವಾತಂತ್ರ್ಯವನ್ನು ನಾವು ಎತ್ತಿ ಹಿಡಿಯಬೇಕು’ ಎಂದು ಬರೆದುಕೊಳ್ಳುವ ಮೂಲಕ ಸಾಕಷ್ಟು ಟೀಕೆಗಳಿಗೆ ಒಳಗಾಗುತ್ತಿದ್ದಾರೆ.

ಇನ್ನು ವಿದ್ಯಾರ್ಥಿಗಳ ವಿರುದ್ಧ ಮಾರತ್​ಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಶಕ್ಕೆ ಪಡೆದುಕೊಂಡ ಪೊಲೀಸರು ತನಿಖೆ ನಡೆಸಿದಾಗ ತಮಾಷೆ ಮಾಡಲು ಹೀಗೆ ಮಾಡಿದ್ದೇವೆ ಎಂದಿದ್ದಾರೆ. ಆದರೂ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡು ತನಿಖೆ ನಡೆಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ