ಪುಣೆ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮರಾಠಿ ಹಾಗೂ ಬಾಲಿವುಡ್ ಹಿರಿಯ ನಟ ವಿಕ್ರಮ್ ಗೋಖಲೆ ಅವರು ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಬುಧವಾರ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ. ಇವರು ಹೆಸರಾಂತ ಮರಾಠಿ ರಂಗಭೂಮಿ ಹಾಗೂ ಸಿನಿಮಾ ನಟ ಚಂದ್ರಕಾಂತ್ ಗೋಖಲೆ ಅವರ ಪುತ್ರರಾಗಿದ್ದಾರೆ.
ವಿಕ್ರಮ್ ಗೋಖಲೆ ಅವರು ಹಿರಿತೆರೆ ಮಾತ್ರವಲ್ಲದೆ ಕಿರುತೆರೆ ಹಾಗೂ ರಂಗ ಕಲಾವಿದರಾಗಿಯೂ ಹೆಸರು ಪಡೆದಿದ್ದಾರೆ. ದೀರ್ಘಕಾಲದಿಂದ ಕಾಯಿಲೆಗಳಿಂದ ಬಳಲುತ್ತಿದ್ದ ಇವರು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಮಧ್ಯಾಹ್ನ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.





