Mysore
19
broken clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಹನೂರು : ಒಡೆಯರ್ ಪಾಳ್ಯ ಕೆರೆ ಒತ್ತುವರಿ ತೆರವು

ಹನೂರು: ಸುಮಾರು 30 ವರ್ಷಗಳಿಂದ ಕೆರೆ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಅಂಗಡಿ ಮಳಿಗೆ ನಿರ್ಮಿಸಿ ವ್ಯಾಪಾರ ಮಾಡುತ್ತಿದ್ದ ಮಳಿಗೆಗಳನ್ನು ತಾಲೂಕು ಆಡಳಿತ ಸಮ್ಮುಖದಲ್ಲಿ ಇಂದು ತೆರವುಗೊಳಿಸಲಾಯಿತು.

ಕೆರೆ ಒತ್ತುವರಿಯಾಗಿರುವ ಬಗ್ಗೆ ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಹಲವಾರು ಬಾರಿ ವರದಿಯಾಗಿತ್ತು. ಇದಲ್ಲದೆ ಸ್ಥಳೀಯರು ಜಿಲ್ಲಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರಿಗೆ ಕೆರೆ ಒತ್ತುವರಿ ಮಾಡುವಂತೆ ಮನವಿ ಸಲ್ಲಿಸಿದ್ದರು, ಈ ಹಿನ್ನೆಲೆ ಕೆರೆ ಒತ್ತುವರಿ ತೆರವುಗೊಳಿಸಲಾಗಿದೆ.

ಹುತ್ತೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಗಿರಿಜಾ ಶೇಖರ್ ಮಾತನಾಡಿ ಗ್ರಾಮ ಪಂಚಾಯಿತಿ ವತಿಯಿಂದ ಕೆರೆ ಅಭಿವೃದ್ಧಿ ಮಾಡಲು ಈಗಾಗಲೇ ಯೋಜನೆ ಸಿದ್ದವಾಗಿದ್ದು,
ಕೆರೆ ಹೊತ್ತುವರಿ ತೆರವು ಕಾರ್ಯ ಪೂರ್ಣಗೊಂಡ ತಕ್ಷಣವೇ ಕೆರೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಒತ್ತುವರಿ ತೆರವು ಕಾರ್ಯದಲ್ಲಿ ತಹಶಿಲ್ದಾರ್ ಆನಂದಯ್ಯ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್ ಹಾಜರಿದ್ದರು.

ವೃತ ನಿರೀಕ್ಷಕ ಸಂತೋಷ್ ಕಶ್ಯಪ್ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು  ಈ ಸಂದರ್ಭದಲ್ಲಿ ಹುತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಪಾಧ್ಯಕ್ಷ ಪುಷ್ಪಲತಾ ಬಸವರಾಜು ಸದಸ್ಯರಾದ ಪುಟ್ಟ ವೀರ ನಾಯಕ, ಮೇಘ ಮಧು, ಹೆಚ್ ಮಹದೇವಸ್ವಾಮಿ, ಶೇಖರ್, ಮಂಗಳಮ್ಮ, ಪಿ ಡಿ ಓ ಕಾಸವ್ವ ಅಜ್ಜಪ್ಪ ಕುರುಬರ ಹಾಗೂ ಸಾರ್ವಜನಿಕರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!