Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಡಿಸೆಂಬರ್‌ ಒಳಗೆ ಮೈಸೂರಿನಲ್ಲಿ ವಿಷ್ಣುವರ್ಧನ್‌ ಸ್ಮಾರಕ ಉದ್ಘಾಟನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಷ್ಣುವರ್ಧನ್ ಅವರಿದ್ದ ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ ನಿರ್ಮಾಣವಾಗಿರುವ ಮನೆಯ ಗೃಹ ಪ್ರವೇಶ ಕಾರ್ಯಕ್ರಮದ ವೇಳೆ ಮಾತನಾಡಿದರು.

ಭಾರತಿಯವರು ಖುದ್ದಾಗಿ ಬಂದು ಗೃಹಪ್ರವೇಶಕ್ಕೆ ಆಹ್ವಾನ ನೀಡಿದ್ದರು. ವಿಷ್ಣುವರ್ಧನ್ ಅವರಿದ್ದ ಮನೆಯನ್ನು ಇನ್ನಷ್ಟು ಚಂದ ಮಾಡಿದ್ದಾರೆ. ನವೀಕರಣಗೊಂಡಿರುವ ವಿಷ್ಣುವರ್ಧನ್ ಅವರ ಮನೆಯ ಹಿಂದೆ ಭಾರತಿ ವಿಷ್ಣುವರ್ಧನ್ ಅವರ ಪ್ರಯತ್ನ ಹಾಗೂ ಶ್ರಮ ಎದ್ದುಕಾಣುತ್ತಿದೆ. ವಿಷ್ಣು ವರ್ಧನ್ ಅವರ ತ್ಯಾಗವನ್ನು ಅಳವಡಿಸಿದ್ದಾರೆ ಎನ್ನುವುದು ನನ್ನ ಭಾವನೆ. ಅವರುಗೆ ಶುಭ ಕೋರಲು ಬಂದಿದ್ದೇನೆ ಎಂದರು .

ಮೈಸೂರಿನಲ್ಲಿ ನಿರ್ಮಾಣ ವಾಗುತ್ತಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪೂರ್ಣ ಗೊಳ್ಳುತ್ತಾ ಬಂದಿದೆ. ಡಿಸೆಂಬರ್ ಒಳಗೆ ಸ್ಮಾರಕದ ಉದ್ಘಾಟನೆಯನ್ನು ಅದ್ದೂರಿಯಾಗಿ ಮಾಡಲು ತೀರ್ಮಾನಿಸಲಾಗಿದೆ. ಹೆಚ್ಚಿನ ವಿವರಗಳನ್ನು ಅವರ ಕುಟುಂಬದವರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು. ವಿಷ್ಣುವರ್ಧನ್ ಅವರ ಮೇರು ವ್ಯಕ್ತಿತ್ವ ಹಾಗೂ ಘನತೆಗೆ ತಕ್ಕ ಹಾಗೆ ಕಾರ್ಯಕ್ರಮವನ್ನು ವೈಭವಯುತವಾಗಿ ಆಯೋಜಿಸಲಾಗುವುದು ಎಂದರು.

ಚುಕ್ಕೆ ರೋಗ ತಡೆಗೆ ಕ್ರಮ
ಚಿಕ್ಕಮಗಳೂರಿನಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ ಬಂದಿದ್ದು, ವಿಜ್ಞಾನಿಗಳ ಸಂಶೋಧನೆ ಒಂದು ಹಂತಕ್ಕೆ ಬಂದಿದೆ. ಅದಕ್ಕೆ ಪರಿಹಾರ ನೀಡುವ ಹಾಗೂ ರೋಗ ಹರಡದಂತೆ ಅನುದಾನ ಬಿಡುಗಡೆಯಾಗಿದೆ. ಮಲೆನಾಡ ಭಾಗದಲ್ಲಿ ಆನೆ ಹಾವಳಿ ಹೆಚ್ವಿದ್ದು, ನಾಲ್ಕು ಜಿಲ್ಲೆಗಳಲ್ಲಿ ಅರಣ್ಯ ಪಡೆಗಳನ್ನು ರಚಿಸಿ, ವಾಹನ ಸಲಕರಣೆಗೆ ಅನುದಾನ ಬಿಡುಗಡೆ ಯಾಗುತ್ತಿದೆ ಎಂದರು.

ಶೃಂಗೇರಿಯಲ್ಲಿ ಆಸ್ಪತ್ರೆ
ಶೃಂಗೇರಿಯಲ್ಲಿ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಿದೆ. ಸ್ಥಳದ ಸಂಸ್ಯೆಯಿದ್ದು, ಅದನ್ನು ಬಗೆಹರಿಸಿ ಆಸ್ಪತ್ರೆ ನಿರ್ಮಿಸಲಾಗುವುದು ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ