Mysore
23
overcast clouds

Social Media

ಗುರುವಾರ, 30 ಜುಲೈ 2026
Light
Dark

ನ.29 ರಂದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

ಮೈಸೂರು  : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಇವರ ವತಿಯಿಂದ ಇದೇ ಮಂಗಳವಾರದಂದು ಬೆಳಗ್ಗೆ 11 ಗಂಟೆಗೆ ಕಾವೇರಿ ಸಭಾಂಗಣದಲ್ಲಿ ಕೆಎಎಸ್‌ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರವು ಉದ್ಘಾಟನೆಗೊಳ್ಳಲಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌ ಚೇತನ್‌ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಪ್ರೊ ಶರಣಪ್ಪ ವಿ ಹಲಸೆ ಅವರು ಮಾನ್ಯ ಕುಲಪತಿಗಳು ವಹಿಸಿಕೊಳ್ಳಲಿದ್ದಾರೆ.
ಕುಲಸಚಿವರಾದ ಪ್ರೊ ಕೆ ಎಲ್‌ ಎನ್‌ ಮೂರ್ತಿ ಅವರ ಉಪಸ್ಥಿತಿಯೊದಿಗೆ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿಕೊಡುವಂತೆ ಸಂಯೋಜಕರಾದ ಜೈನಹಳ್ಳಿ ಸತ್ಯನಾರಾಯಣಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!