Mysore
25
broken clouds

Social Media

ಶನಿವಾರ, 08 ಆಗಸ್ಟ್ 2026
Light
Dark

ಅಭಿಮಾನಿಗಳ ಹಾಜರಾತಿಯಿಂದ ವಿಶ್ವದಾಖಲೆ ಪುಟ ಸೇರಿದ ನರೇಂದ್ರ ಮೋದಿ ಕ್ರೀಡಾಂಗಣ

ನವದೆಹಲಿ: ಗುಜರಾತ್​ನ ಅಹಮದಾಬಾದ್​​ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣ ಅಭಿಮಾನಿಗಳ ಹಾಜರಾತಿಯಿಂದ ವಿಶ್ವದಾಖಲೆ ಪುಟ ಸೇರಿದೆ. 2022ರ ಇಂಡಿಯನ್​ ಪ್ರೀಮಿಯರ್​ ಲೀಗ್​ನ(ಐಪಿಎಲ್​) ಫೈನಲ್​ ಪಂದ್ಯದಲ್ಲಿ ಅತಿಹೆಚ್ಚು ಅಭಿಮಾನಿಗಳು ಕ್ರೀಡಾಂಗಣಕ್ಕೆ ಹಾಜರಾಗಿದ್ದು, ಇದು ಗಿನ್ನೆಸ್​ ದಾಖಲೆಯಾಗಿದೆ.

ವಿಶ್ವದಲ್ಲಿಯೇ ಅತಿದೊಡ್ಡ ಕ್ರೀಡಾಂಗಣವೆಂದು ಗುರುತಿಸಿಕೊಂಡಿರುವ ಗುಜರಾತ್​ನ ಅಹಮದಾಬಾದ್​​ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣ ಅಭಿಮಾನಿಗಳ ಹಾಜರಾತಿಯಿಂದ ಇದೀಗ ವಿಶ್ವದಾಖಲೆ ಪುಟ ಸೇರಿದ್ದು, ಮೇ 29 ರಂದು ನಡೆದ ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯ ನೋಡಲು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂಗೆ 101,566 ಮಂದಿ ಹಾಜರಾಗಿದ್ದರು. ಇದು ಟಿ20 ಕ್ರಿಕೆಟ್‌ನ ಇತಿಹಾಸದಲ್ಲೇ ಹಾಜರಾದ ಅತಿ ದೊಡ್ಡ ಅಭಿಮಾನಿಗಳ ಸಂಖ್ಯೆಯಾಗಿದೆ.ವಿಶ್ವದಾಖಲೆಗೆ ಸೇರಿದ ಮಾಹಿತಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಕಾರ್ಯದರ್ಶಿ ಜಯ್​ ಶಾ ಅವರು ಪುರಸ್ಕಾರದ ಪ್ರಮಾಣ ಪತ್ರವನ್ನು ಪಡೆದುಕೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!