ಸುಂಟಿಕೊಪ್ಪ: ಮೇಯಲು ಕಟ್ಟಿಹಾಕಿದ್ದ ಹಸುವಿನೊಂದಿಗೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತನೆ ಮಾಡಿದ ಘಟನೆ ಅಂದಗೋವೆ ಗ್ರಾಮದಲ್ಲಿ ನಡೆದಿದ್ದು, ಸ್ಥಳೀಯ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಸಿ.ಎ.ದೇವಯ್ಯ ಅವರು ತಮ್ಮ ಹಸುವನ್ನು ಮೇಯಲು ಬಿಟ್ಟಿದ್ದರು. ಕೆಲ ಸಮಯದ ನಂತರ ಹಸುವನ್ನು ಮನೆಗೆ ಹೊಡೆದುಕೊಂಡು ಬರಲು ಹೋದಾಗ ಅಪರಿಚಿತ ವ್ಯಕ್ತಿಯೊಬ್ಬ ಹಸುವಿನೊಂದಿಗೆ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದದ್ದು ಕಂಡಬು ಬಂದಿದೆ. ತಕ್ಷಣ ದೇವಯ್ಯ ವ್ಯಕ್ತಿಯನ್ನು ಹಿಡಿದು ವಿಚಾರಿಸಿದ್ದಾರೆ.
ನಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಮೊಕದ್ದಮೆ ದಾಖಲಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಈ ಸಂದರ್ಭದಲ್ಲಿ ಆರೋಪಿ ಅಬ್ಬೂಬಕ್ಕರ್ ಸಿದ್ಧಿಕ್ ಎಂದು ತಿಳಿದು ಬಂದಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.




